ಮನೆಯಂಗಳದ ಮಾತುಕತೆಯಲ್ಲಿ ಭಾರತರತ್ನ ಪ್ರೊ.ಸಿಎನ್‌ಆರ್ ರಾವ್

Update: 2018-06-19 13:46 GMT

ಬೆಂಗಳೂರು, ಜೂ.19: ಕನ್ನಡ ಮತ್ತು ಸಂಸ್ಕತಿ ಇಲಾಖೆ ವತಿಯಿಂದ ಜೂ.23ರ ಶನಿವಾರದಂದು ಸಂಜೆ 4ಕ್ಕೆ ನಗರದ ರವೀಂದ್ರ ಕಲಾಕ್ಷೇತ್ರದಲ್ಲಿ ಮನೆಯಂಗಳದಲ್ಲಿ ಮಾತುಕತೆ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದು, ಈ ತಿಂಗಳ ಅತಿಥಿಯಾಗಿ ಭಾರತರತ್ನ ಪ್ರೊ.ಸಿಎನ್‌ಆರ್ ರಾವ್ ಪಾಲ್ಗೊಳ್ಳಲಿದ್ದಾರೆ.

ಈ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ರಾಜ್ಯದ ಉಪ ಮುಖ್ಯಮಂತ್ರಿ ಜಿ. ಪರಮೇಶ್ವರ್, ಕನ್ನಡ ಮತ್ತು ಸಂಸ್ಕತಿ ಸಚಿವೆ ಜಯಮಾಲಾ ಅವರು ಹಾಗೂ ಚಿಕ್ಕಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಉದಯ ಗರುಡಾಚಾರ್ ಉಪಸ್ಥಿತರಿರುವರು. ಹಾಗೂ ಈ ಹಿಂದಿನ ಮನೆಯಂಗಳದಲ್ಲಿ ಮಾತುಕತೆ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಅತಿಥಿಗಳು, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಲ್ಲಿ ಸೇವೆ ಸಲ್ಲಿಸಿದ ಹಿಂದಿನ ನಿರ್ದೇಶಕರುಗಳು ವಿಶೇಷ ಆಹ್ವಾನಿತರಾಗಿ ಈ ಕಾರ್ಯಕ್ರಮಕ್ಕೆ ಆಗಮಿಸಲಿದ್ದಾರೆ.

ಜೂ.23ರಂದು ಮಧ್ಯಾಹ್ನ 3.30ಕ್ಕೆ ಭಾರತರತ್ನ ಪ್ರೊ.ಸಿಎನ್‌ಆರ್ ರಾವ್ ಅವರ ಜೀವನ ಸಾಧನೆ ಕುರಿತ ಛಾಯಾಚಿತ್ರ ಪ್ರದರ್ಶನ ಹಾಗೂ ಖ್ಯಾತ ಹಿನ್ನೆಲೆ ಗಾಯಕಿ ಬಿ.ಆರ್.ಛಾಯಾ ತಂಡದಿಂದ ಸುಗಮ ಸಂಗೀತ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಪ್ರಕಟಣೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News