ಆ್ಯಪ್ ಬಳಸಿ ರೈಲ್ವೆ ಟಿಕೆಟ್ ಬುಕ್ಕಿಂಗ್

Update: 2018-06-19 15:58 GMT

ಬೆಂಗಳೂರು, ಜೂ.19: ನೈರುತ್ಯ ರೈಲ್ವೆ ಇಲಾಖೆಯು ಪ್ರಯಾಣಿಕರ ಅನುಕೂಲಕ್ಕಾಗಿ ಆನ್‌ಲೈನ್ ಮೂಲಕ ಯುಟಿಎಸ್ ಮೊಬೈಲ್ ಆ್ಯಪ್ ಬಳಸಿಕೊಂಡು ಸುಲಭದ ರೀತಿಯಲ್ಲಿ ರೈಲ್ವೆ ಟಿಕೆಟ್ ಬುಕ್ಕಿಂಗ್ ಮಾಡುವ ನೂತನ ವ್ಯವಸ್ಥೆ ಜಾರಿಗೆ ತಂದಿದೆ.

ಈ ಬಗ್ಗೆ ಮಂಗಳವಾರ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ರೈಲ್ವೆ ಉಪವಿಭಾಗಾಧಿಕಾರಿ ಸಕ್ಸೇನಾ, ಪ್ರಯಾಣಿಕರ ಅನುಕೂಲಕ್ಕಾಗಿ ನೂತನ ವ್ಯವಸ್ಥೆ ಜಾರಿಗೆ ತಂದಿದ್ದು, ಯುಟಿಎಸ್ ಆ್ಯಪ್ ಮೂಲಕ ಕಾಯ್ದಿರಿಸಿದ ಟಿಕೆಟ್ ಖರೀದಿಸಿ ಬುಕ್ಕಿಂಗ್ ಐಡಿ ಮತ್ತು ಟಿಕೆಟ್ ವಿವರಗಳನ್ನು ಎಸ್‌ಎಂಎಸ್ ಮೂಲಕ ಪಡೆಯಬಹುದು ಎಂದರು.

ಈ ಆ್ಯಪ್ ಬಳಸುವುದರಿಂದ ಪ್ರಯಾಣಿಕರಿಗೆ ಸಮಯ ಉಳಿತಾಯವಾಗಲಿದೆ. ಈಗಾಗಲೇ 51 ಸಾವಿರ ಬೆಂಗಳೂರಿನ ಪ್ರಯಾಣಿಕರು ಈ ಆ್ಯಪ್ ಬಳಕೆ ಮಾಡುತ್ತಿದ್ದಾರೆ. ಮುಂದಿನ ದಿನಗಳಲ್ಲಿ ಇದರ ಸಂಖ್ಯೆ ಹೆಚ್ಚಾಗಲಿದೆ ಎಂದು ಮಾಹಿತಿ ನೀಡಿದರು.
 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News