ಮರಕ್ಕೆ ಕಾರು ಢಿಕ್ಕಿ: ಚಾಲಕ ಮೃತ್ಯು
Update: 2018-06-19 21:51 IST
ಕಾರ್ಕಳ, ಜೂ.19: ಕಾರ್ಕಳ -ಮೂಡಬಿದ್ರೆ ರಾಷ್ಟ್ರೀಯ ಹೆದ್ದಾರಿಯ ಸಾಣೂರು ಗ್ರಾಮದ ಮುರತ್ತಂಗಡಿ ಎಂಬಲ್ಲಿ ಸೋಮವಾರ ಸಂಜೆ ಕಾರೊಂದು ಮರಕ್ಕೆ ಢಿಕ್ಕಿ ಹೊಡೆದ ಪರಿಣಾಮ ಚಾಲಕ ಮೃತಪಟ್ಟ ಬಗ್ಗೆ ವರದಿಯಾಗಿದೆ.
ಮೃತರನ್ನು ಲೋಕನಾಥ ರೈ ಎಂದು ಗುರುತಿಸಲಾಗಿದೆ. ಮೂಡಬಿದ್ರೆ ಕಡೆಯಿಂದ ಕಾರ್ಕಳ ಕಡೆಗೆ ಹೋಗುತ್ತಿದ್ದ ಕಾರು ನಿಯಂತ್ರಣ ತಪ್ಪಿ ರಸ್ತೆ ಬದಿಯ ಮರಕ್ಕೆ ಢಿಕ್ಕಿ ಹೊಡೆಯಿತ್ತೆನ್ನಲಾಗಿದೆ. ಇದರಿಂದ ಗಂಭೀರವಾಗಿ ಗಾಯಗೊಂಡ ಚಾಲಕ ಲೋಕನಾಥ ರೈ ಕಾರ್ಕಳ ಸರಕಾರಿ ಆಸ್ಪತ್ರೆಗೆ ಕರೆದುಕೊಂಡು ಹೋಗುವ ದಾರಿ ಮಧ್ಯೆ ಮೃತಪಟ್ಟರು. ಈ ಬಗ್ಗೆ ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.