ಪುತ್ತೂರು: ಅಕ್ರಮ ಗಾಂಜಾ ಸಾಗಾಟ; ಇಬ್ಬರು ಆರೋಪಿಗಳು ಸೆರೆ

Update: 2018-06-19 17:04 GMT

ಪುತ್ತೂರು, ಜೂ. 19: ಅಕ್ರಮ ಗಾಂಜಾ ಸಾಗಾಟ ಪ್ರಕರಣವೊಂದನ್ನು ಮಂಗಳವಾರ ಪತ್ತೆ ಹಚ್ಚಿದ ನಗರ ಪೊಲೀಸರು ಪಶ್ಚಿಮ ಬಂಗಾಳದ ಇಬ್ಬರು ಆರೋಪಿಗಳನ್ನು ಬಂಧಿಸಿ, ಗಾಂಜಾ ಹಾಗೂ ಮೊಬೈಲ್ ವಶಕ್ಕೆ ಪಡೆದುಕೊಂಡಿದ್ದಾರೆ.

ಪಶ್ಚಿಮ ಬಂಗಾಳದ ಮುಶ್ರಪ್ ಹುಸೈನ್ ಬಫಾರಿ(47) ಮತ್ತು ಸುಹೇಲ್ ಅಲಿ(24) ಬಂಧಿತ ಆರೋಪಿಗಳು. ಪುತ್ತೂರು ನಗರದಲ್ಲಿನ ಮಾಣಿ ಮೈಸೂರು ರಸ್ತೆಯ ಮಂಜಲ್ಪಡ್ಪು ಎಂಬಲ್ಲಿ ಆರೋಪಿಗಳನ್ನು ಮಾಲು ಸಮೇತ ಬಂಧಿಸಲಾಗಿದೆ. ಬಂಧಿತರಿಂದ 989 ಗ್ರಾಂ ಗಾಂಜಾ, 2 ಮೊಬೈಲ್ ಹಾಗೂ ಬ್ಯಾಗನ್ನು ವಶಪಡಿಕೊಂಡಿದ್ದಾರೆ.

ಖಚಿತ ಮಾಹಿತಿ ಆಧಾರದಲ್ಲಿ ನಗರ ಠಾಣೆಯ ಇನ್ಸ್‌ಪೆಕ್ಟರ್ ಶರಣ ಗೌಡ ಅವರ ಮಾರ್ಗದರ್ಶನದಲ್ಲಿ ಎಸ್‌ಐ ನಂದಿನಿ ಹಾಗೂ ಸಿಬ್ಬಂದಿಗಳು ಕಾರ್ಯಾ ಚರಣೆ ನಡೆಸಿದ್ದರು. ಈ ಸಂದರ್ಭದಲ್ಲಿ ಆರೋಪಿಗಳ ಕೈಯಲ್ಲಿದ್ದ ಬ್ಯಾಗ್‌ನಲ್ಲಿ ಗಾಂಜಾ ಪತ್ತೆಯಾಗಿತ್ತು. ಅವರನ್ನು ವಶಕ್ಕೆ ಪಡೆದುಕೊಂಡ ಪೊಲೀಸರು ವಿಚಾರಣೆ ನಡೆಸಿದಾಗ ವಿದ್ಯಾರ್ಥಿಗಳು ಹಾಗೂ ಹೊಟೇಲ್ ಗಳಿಗೆ ಮಾರಾಟ ಮಾಡಲು ಬಂದಿರುವುದಾಗಿ ಬಾಯಿಬಿಟ್ಟಿದ್ದಾರೆ.

ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರು ಪಡಿಸಲಾಗಿದ್ದು ನ್ಯಾಯಾಲಯವು ನ್ಯಾಯಾಂಗ ಬಂಧನ ವಿದಿಸಿದೆ. ಎ.ಎಸ್.ಐ ಶ್ರೀಧರ್, ಲೋಕನಾಥ ಸಿಬಂದಿಗಳಾದ ಜಗದೀಶ, ದಾಮೋದರ, ಚೋಲಪ್ಪ , ಶಿವಪ್ಪ ನಾಯ್ಕ, ಮೋಹನ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News