ಜೂ.21: ವಿಶ್ವ ಯೋಗ ದಿನಾಚರಣೆ
Update: 2018-06-19 22:46 IST
ಉಡುಪಿ, ಜೂ.19: ಭಾರತೀಯ ರೆಡ್‌ಕ್ರಾಸ್ ಸಂಸ್ಥೆ ಉಡುಪಿ ಜಿಲ್ಲಾ ಘಟಕದ ವತಿಯಿಂದ ವಿಶ್ವ ಯೋಗ ದಿನಾಚರಣೆಯನ್ನು ಅಜ್ಜರಕಾಡು ರೆಡ್ ಕ್ರಾಸ್ ಭವನದಲ್ಲಿ ಜೂ.21ರಂದು ಹಮ್ಮಿಕೊಳ್ಳಲಾಗಿದೆ.
ಮುಖ್ಯ ಅತಿಥಿಯಾಗಿ ಲಯನ್ ಸಾಧನ ಕಿಣಿ ಭಾಗವಹಿಸಲಿರುವರು. ಈ ಸಂದರ್ಭದಲ್ಲಿ ಡಾ.ಜಿ.ಶಂಕರ್ ಕಾಲೇಜಿನ ವಿದ್ಯಾರ್ಥಿಗಳಿಗೆ ಯೋಗ ತರಬೇತಿ ಯನ್ನು ತಜ್ಞ ಯೋಗ ಶಿಕ್ಷಕಿ ರಾಧಿಕಾ ರವಿರಾಜ್ ನೀಡಲಿರುವರು. ಅಧ್ಯಕ್ಷತೆ ಯನ್ನು ಸಂಸ್ಥೆಯ ಸಭಾಪತಿ ಡಾ.ಉಮೇಶ್ ಪ್ರಭು ವಹಿಸಲಿರುವರು.
ಸಂಸ್ಥೆಯ ಉಪಸಭಾಪತಿ ಡಾ. ಅಶೋಕ್‌ಕುಮಾರ್ ವೈ.ಜಿ. ಗೌರವ ಖಜಾಂಚಿ ಟಿ. ಚಂದ್ರಶೇಖರ್, ಗೌರವ ಕಾರ್ಯದರ್ಶಿ ಬಾಲಕೃಷ್ಣ ಶೆಟ್ಟಿ ಉಪಸ್ಥಿತರಿರುವರು ಎಂದು ಪ್ರಕಟಣೆ ತಿಳಿಸಿದೆ.