ಶಂಕರಪುರ ಫ್ರೌಢ ಶಾಲಾ ಸಂಸ್ಥಾಪನಾ ದಿನಾಚರಣೆ

Update: 2018-06-19 17:21 GMT

 ಶಿರ್ವ, ಜೂ.19: ಶಂಕರಪುರ ಸೈಂಟ್ ಜೋನ್ಸ್ ಫ್ರೌಢ ಶಾಲೆಯ 37ನೇ ಸಂಸ್ಥಾಪನಾ ದಿನಾಚರಣೆಯು ಸೋಮವಾರ ಚರ್ಚ್‌ನ ಸಭಾಂಗಣದಲ್ಲಿ ಜರಗಿತು.

 ಅಧ್ಯಕ್ಷತೆ ವಹಿಸಿದ್ದ ಶಾಲಾ ಸಂಚಾಲಕ ಹಾಗೂ ಸೈಂಟ್ ಜೋನ್ಸ್ ಧರ್ಮ ಕೇಂದ್ರದ ಪ್ರಧಾನ ಧರ್ಮಗುರು ರೆ.ಫಾ.ಫರ್ಡಿನಾಂಡ್ ಗೊನ್ಸಾಲ್ವಿಸ್ ಸಂಸ್ಥೆಯ ಸಂಸ್ಥಾಪಕ ಅಂದಿನ ಧರ್ಮಗುರು ದಿವಂಗತ ರೆ.ಫಾ. ಜಿ.ಬಿ.ಡಿಸೋಜ ಅವರ ಭಾವಚಿತ್ರಕ್ಕೆ ಪುಷ್ಪಾರ್ನೆ ಸಲ್ಲಿಸಿ ಆಶೀರ್ವಚನ ನೀಡಿದರು.

ನಿವೃತ್ತ ಮುಖ್ಯ ಶಿಕ್ಷಕಿ ಹಾಗೂ ಚರ್ಚ್ ಪಾಲನಾ ಮಂಡಳಿ ಕಾರ್ಯದರ್ಶಿ ಕ್ಲಾರಾ ಮೆಂಡೋನ್ಸಾ, ನಿವೃತ್ತ ಶಿಕ್ಷಕ ಬಿ.ಪುಂಡಲೀಕ ಮರಾಠೆ ಮಾತನಾಡಿದರು. ಶಾಲಾ ನಿವೃತ್ತ ಮುಖ್ಯೋಪಾಧ್ಯಾಯ ಜೋನ್ ಲೋಬೊ, ಚರ್ಚ್ ಪಾಲನಾ ಮಂಡಳಿ ಉಪಾಧ್ಯಕ್ಷ ಮಾರ್ಕ್ವಾಜ್, ರಕ್ಷಕ-ಶಿಕ್ಷಕ ಸಂಘದ ಅಧ್ಯಕ್ಷ ನಾಗೇಶ ಅಮೀನ್, ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷೆ ಸಿಲ್ವಿಯಾ ಕಸ್ತಲಿೊ, ಅನಿತಾ ಡಿಸೋಜ ಉಪಸ್ಥಿತರಿದ್ದರು.

ಶಾಲಾ ಮುಖ್ಯ ಶಿಕ್ಷಕ ಮೋಹನದಾಸ್ ಆರ್.ಶೆಟ್ಟಿ ಪ್ರಾಸ್ತಾವಿಕವಾಗಿ ಮಾತನಾ ಡಿದರು. ಶಿಕ್ಷಕ ಇನೆಟ್ ಡೇಸಾ ಸ್ವಾಗತಿಸಿದರು. ಶಿಕ್ಷಕಿ ಅಸುಂಪ್ತಾ ಡಿಮೆಲ್ಲೊ ವಂದಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News