ಮುಂಡಗೋಡ: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆ
Update: 2018-06-19 23:26 IST
ಮುಂಡಗೋಡ,ಜೂ.19: ವ್ಯಕ್ತಿಯೋರ್ವ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ತಾಲೂಕಿನ ಮಳಗಿ ಗ್ರಾ.ಪಂ ವ್ಯಾಪ್ತಿಯ ಧರ್ಮಾಕಾಲೋನಿಯ ಬಂಜಾರ ತಾಂಡಾದಲ್ಲಿ ನಡೆದಿದೆ.
ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ ಶಿವಪ್ಪ ಲಮಾಣಿ ಎಂದು ತಿಳಿದು ಬಂದಿದೆ. ಮಂಗಳವಾರ ಮನೆಯಲ್ಲಿ ಯಾರೂ ಇಲ್ಲದ ವೇಳೆ ಹಗ್ಗದಿಂದ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಹೇಳಲಾಗಿದೆ
ಸ್ಥಳಕ್ಕೆ ಮಳಗಿ ಔಟ್‍ಪೊಸ್ಟ್ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.