ಜಮ್ಮು-ಕಾಶ್ಮೀರದಲ್ಲಿ ರಾಜ್ಯಪಾಲರ ಆಡಳಿತಕ್ಕೆ ರಾಷ್ಟ್ರಪತಿ ಅಂಕಿತ

Update: 2018-06-20 04:52 GMT

 ಹೊಸದಿಲ್ಲಿ, ಜೂ.20:  ಜಮ್ಮು ಮತ್ತು ಕಾಶ್ಮೀರದಲ್ಲಿ ರಾಜ್ಯಪಾಲರ ಆಡಳಿತಕ್ಕೆ ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್ ಬುಧವಾರ ಅಂಕಿತ ಹಾಕಿದ್ದಾರೆ.
 ಜಮ್ಮು ಮತ್ತು ಕಾಶ್ಮೀರದಲ್ಲಿ ಪಿಡಿಪಿ-ಬಿಜೆಪಿ ಮೈತ್ರಿ ಸರಕಾರ ಮುರಿದು ಬಿದ್ದ ಹಿನ್ನೆಲೆಯಲ್ಲಿ ರಾಜ್ಯಪಾಲ ಎನ್‌.ಎನ್‌. ವೋಹ್ರಾ ಅವರು ರಾಜ್ಯಪಾಲರ ಆಳ್ವಿಕೆಗೆ ರಾಷ್ಟ್ರಪತಿ ಅವರಿಗೆ ಶಿಫಾರಸು ಮಾಡಿದ್ದರು.
ಮಂಗಳವಾರ  ಬಿಜೆಪಿಯು  ಪಿಡಿಪಿಗೆ  ನೀಡಿದ್ದ ಬೆಂಬಲವನ್ನು ಹಿಂಪಡೆದ ಹಿನ್ನೆಲೆಯಲ್ಲಿ , ಮೈತ್ರಿ ಸರಕಾರ ಪತನಗೊಂಡು ಮುಖ್ಯ ಮಂತ್ರಿ  ಮೆಹಬೂಬಾ ಮುಫ್ತಿ ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ್ದರು.
ಇದೀಗ  ಜಮ್ಮು ಮತ್ತು ಕಾಶ್ಮೀರದಲ್ಲಿ ನಾಲ್ಕನೇ ಬಾರಿ ರಾಜ್ಯಪಾಲರ ಆಳ್ವಿಕೆ ಜಾರಿಗೆ ಬಂದಿದೆ.ಈ ಮೊದಲು 2008, 2015 ಮತ್ತು 2016ರಲ್ಲಿ ಜಮ್ಮು ಮತ್ತು ಕಾಶ್ಮೀರದಲ್ಲಿ ರಾಜ್ಯಪಾಲರ ಆಡಳಿತ ಜಾರಿಯಾಗಿತ್ತು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News