ವಿದ್ಯಾರ್ಥಿನಿ ಕಾವ್ಯ ಅಸಹಜ ಸಾವು ಪ್ರಕರಣ: ಸಿಒಡಿ ತನಿಖೆಗೆ ಒತ್ತಾಯಿಸಿ ಪ್ರತಿಭಟನೆ

Update: 2018-06-20 13:09 GMT

ಮಂಗಳೂರು, ಜೂ.20: ಮೂಡಬಿದ್ರೆಯ ಕಾಲೇಜ್ ವಿದ್ಯಾರ್ಥಿನಿ ಕಾವ್ಯಾಳ ಅಸಹಜ ಸಾವಿನ ಪ್ರಕರಣವನ್ನು ಸಿಒಡಿಗೆ ಹಸ್ತಾಂರಿಸಲು ಒತ್ತಾಯಿಸಿ ಜಸ್ಟೀಸ್ ಫಾರ್ ಕಾವ್ಯ ಹೋರಾಟ ಸಮಿತಿ ವತಿಯಿಂದ ಇಂದು ಪ್ರತಿಭಟನೆ ನಡೆಯಿತು.

ದ.ಕ. ಜಿಲ್ಲಾಧಿಕಾರಿ ಕಚೇರಿ ಎದುರು ನಡೆದ ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿದ ಹೋರಾಟ ಸಮಿತಿಯ ಸಂಚಾಲಕ, ನ್ಯಾಯವಾದಿ ದಿನಕರ ಶೆಟ್ಟಿ, ರಾಜ್ಯದಲ್ಲಿ ಭಾರೀ ಸುದ್ದಿ ಮಾಡಿದ್ದ ವಿದ್ಯಾರ್ಥಿನಿ ಕಾವ್ಯಾ ಸಾವಿನ ಪ್ರಕರಣ ನಡೆದು 11 ತಿಂಗಳಾದರೂ ತನಿಖೆಯಲ್ಲಿ ಯಾವುದೇ ಪ್ರಗತಿಯಾಗಿಲ್ಲ. ತನಿಖಾಧಿಕಾರಿ 2 ತಿಂಗಳೊಳಗೆ ಈ ಪ್ರಕರಣವನ್ನು ಬೇಧಿಸುವುದಾಗಿ ಹೇಳಿದ್ದರೂ ಯಾವುದೇ ಪ್ರಗತಿಯಾಗಿಲ್ಲ. ಹಾಗಾಗಿ ಜುಲೈ 20ರೊಳಗೆ ಈ ಪ್ರಕರಣವನ್ನು ಸಿಒಡಿಗೆ ಕೊಟ್ಟು ನ್ಯಾಯ ದೊರಕಿಸಬೇಕು. ಇಲ್ಲವಾದಲ್ಲಿ ವಿದ್ಯಾರ್ಥಿಗಳ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಗುವುದು ಎಂದರು.

ಮೃತ ಕಾವ್ಯ ಕುಟುಂಬಕ್ಕೆ ಪರಿಹಾರವಾಗಿ ಸಂಸ್ಥೆಯಿಂದ 25 ಲಕ್ಷ ರೂ. ಒದಗಿಸುವಂತೆ ಕೋರಲಾಗಿತ್ತು. ಇದನ್ನು ಸಂಸ್ಥೆ ಚಾಲೆಂಜ್ ಮಾಡಿದ್ದು, ಇದರ ವಿರುದ್ಧ ಕಾನೂನಾತ್ಮಕ ಹೋರಾಟ ಮುಂದುವರಿಯಲಿದೆ. ಪ್ರಕರಣದ ಬಗ್ಗೆ ಪೊಲೀಸ್ ಇಲಾಖೆಯಿಂದ ಸಮರ್ಪಕ ತನಿಖೆ ನಡೆದಿಲ್ಲವಾದ್ದರಿಂದ ಪ್ರಕರಣವನ್ನು ಸಿಒಡಿ ಮೂಲಕ ನಡೆಸಬೇಕೆಂಬುದು ನಮ್ಮ ಆಗ್ರಹ ಎಂದವರು ಒತ್ತಾಯಿಸಿದರು. ಪ್ರತಿಭಟನೆಯಲ್ಲಿ ರಘುವೀರ್ ಸೂಟರ್ ಪೇಟೆ ಹಾಗೂ ಇತರರು ಭಾಗವಹಿಸಿದ್ದರು.

Full View

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News