​ಕಾನೂನಾತ್ಮಕವಾಗಿ ನಾವು ಡಿಕೆಶಿ ಜತೆಗಿದ್ದೇವೆ : ಸಿಎಂ ಹೆಚ್ ಡಿಕೆ

Update: 2018-06-20 11:38 GMT

ಬೆಂಗಳೂರು, ಜೂ.20: ಸಚಿವ ಡಿ.ಕೆ. ಶಿವಕುಮಾರ್ ಕಾನೂನಾತ್ಮಕವಾಗಿ ಹೋರಾಡುತ್ತಿದ್ದಾರೆ. ಕಾನೂನಾತ್ಮಕವಾಗಿ ನಾವು ಅವರೊಂದಿಗೆ ಇರುವುದಾಗಿ ಮುಖ್ಯ ಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಹೇಳಿದ್ದಾರೆ.
ಡಿಕೆಶಿಗೆ  ಐಟಿ ನೋಟಿಸ್ ವಿಚಾರದಲ್ಲಿ  ಗೃಹ ಕಚೇರಿ ಕೃಷ್ಣಾದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದರು.
 ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡುವಂತೆ ಬಿಜೆಪಿ ಒತ್ತಾಯಿಸಿರುವುದಕ್ಕೆ ಪ್ರತಿಕ್ರಿಯೆ ನೀಡಿರುವ ಅವರು ಸಚಿವ ಡಿಕೆ ಶಿವಕುಮಾರ್ ರಾಜೀನಾಮೆ ಕೊಡುವಂತದ್ದು ಏನಾಗಿದೆ ? ಎಂದು  ಸಿಎಂ ಕುಮಾರಸ್ವಾಮಿ ಅವರು ಪ್ರಶ್ನಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News