ನಾಯಿಗಳನ್ನು ಸಾಕಲು ಪರವಾನಿಗೆ ಕಡ್ಡಾಯ ವಿಚಾರ: ಸ್ಪಷ್ಟಿಕರಣ ನೀಡಲು ಬಿಬಿಎಂಪಿಗೆ ಹೈಕೋರ್ಟ್ ಆದೇಶ
Update: 2018-06-20 21:54 IST
ಬೆಂಗಳೂರು, ಜೂ.20: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ(ಬಿಬಿಎಂಪಿ) ವ್ಯಾಪ್ತಿಯ ನಿವಾಸಿಗಳು ನಾಯಿಗಳನ್ನು ಸಾಕಲು ಪರವಾನಿಗೆ ಕಡ್ಡಾಯಗೊಳಿಸಿ ಹೊರಡಿಸಿರುವ ಅಧಿಸೂಚನೆಯನ್ನು ಮರುಪರಿಶೀಲಿಸಲಾಗುವುದು ಎಂದು ಹೈಕೋರ್ಟ್‌ಗೆ ಬಿಬಿಎಂಪಿ ಪರ ವಕೀಲರು ತಿಳಿಸಿದ್ದಾರೆ.
ಈ ಸಂಬಂಧ ಪೀಪಲ್ ಫಾರ್ ಎನಿಮಲ್ಸ್ ಸೇರಿ ನಾಲ್ಕು ಸಂಘಟನೆಗಳು ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ದಿನೇಶ್ ಮಾಹೇಶ್ವರಿ ಹಾಗೂ ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿದ್ದ ವಿಭಾಗೀಯ ನ್ಯಾಯಪೀಠ, ನಾಯಿಗಳನ್ನು ಸಾಕಲು ಪರವಾನಿಗೆ ಕಡ್ಡಾಯಗೊಳಿಸಿ ಹೊರಡಿಸಿರುವ ಅಧಿಸೂಚನೆಯ ಬಗ್ಗೆ ಜೂ.21ರ ಗುರುವಾರ ಬಿಬಿಎಂಪಿ ಸ್ಪಷ್ಟನೆ ನೀಡಬೇಕೆಂದು ಸೂಚಿಸಿ, ವಿಚಾರಣೆಯನ್ನು ಮುಂದೂಡಿತು.