ಬಿಎಸ್‌ವೈ ಮೇಲೆ ದಾಳಿ ಯಾಕಿಲ್ಲ; ಕಾಂಗ್ರೆಸ್ ಪ್ರಶ್ನೆ

Update: 2018-06-20 16:26 GMT

ಬೆಂಗಳೂರು, ಜೂ.20: ವರ್ಷದಷ್ಟು ಹಳೆಯ ಆದಾಯ ತೆರಿಗೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರ್ಥಿಕ ಅಪರಾಧಗಳ ನ್ಯಾಯಾಲಯ ಬುಧವಾರದಂದು ರಾಜ್ಯ ಸಚಿವ ಹಾಗೂ ಕಾಂಗ್ರೆಸ್ ಮುಖಂಡ ಡಿ.ಕೆ ಶಿವಕುಮಾರ್ ವಿರುದ್ಧ ನೊಟೀಸ್ ಜಾರಿ ಮಾಡಿದೆ.

ಸದ್ಯ ನೂತನ ಸರಕಾರದಲ್ಲಿ ಜಲ ಸಂಪನ್ಮೂಲ ಹಾಗೂ ವೈದ್ಯಕೀಯ ಶಿಕ್ಷಣ ಸಚಿವರಾಗಿ ಸೇವೆ ಸಲ್ಲಿಸುತ್ತಿರುವ ಡಿ.ಕೆ ಶಿವಕುಮಾರ್, ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರಕಾರ ಅಸ್ತಿತ್ವಕ್ಕೆ ಬರುವಲ್ಲಿ ಮಹತ್ವದ ಪಾತ್ರ ವಹಿಸಿದ್ದರು. ಇದೇ ಕಾರಣದಿಂದ ಬಿಜೆಪಿ ತನ್ನ ವಿರುದ್ಧ ಸೇಡಿನ ಕ್ರಮ ಅನುಸರಿಸುತ್ತಿದೆ ಎಂದು ಅವರು ದೂರಿದ್ದಾರೆ.

ಮಾಜಿ ಬಿಜೆಪಿ ಶಾಸಕರಾಗಿದ್ದು ಇತ್ತೀಚೆಗೆ ಕಾಂಗ್ರೆಸ್ ಸೇರಿರುವ ಬೇಳೂರು ಗೋಪಾಲಕೃಷ್ಣ , ಡಿಕೆಶಿ ಮೇಲಿನ ಆದಾಯ ತೆರಿಗೆ ದಾಳಿಯನ್ನು ತೀವ್ರವಾಗಿ ಖಂಡಿಸಿದ್ದು ಬಿಜೆಪಿ ಮುಖಂಡ ಬಿ.ಎಸ್ ಯಡಿಯೂರಪ್ಪ ಅವರ ಆಪ್ತೆ ಶೋಭಾ ಕರಂದ್ಲಾಜೆ ಅವರ ಮನೆಗೆ ಐಟಿ ದಾಳಿ ಮಾಡಿ ಎಂದು ಆಗ್ರಹಿಸಿದ್ದಾರೆ. ಬಿಎಸ್‌ವೈ ತಾವು ಅಕ್ರಮವಾಗಿ ಸಂಪಾದಿಸಿರುವ ಎಲ್ಲ ಸಂಪತ್ತನ್ನು ಆಕೆಯ ಮನೆಯಲ್ಲಿಟ್ಟಿದ್ದಾರೆ. ಆದಾಯ ತೆರಿಗೆ ಇಲಾಖೆಯು ಬಿಜೆಪಿಯ ಒತ್ತಡದಲ್ಲಿ ಕಾರ್ಯನಿರ್ವಹಿಸುತ್ತಿಲ್ಲ ಎಂದಾದರೆ ಅದು ಕರಂದ್ಲಾಜೆ ಮನೆಯ ಮೇಲೆ ದಾಳಿ ಮಾಡಲಿ ಎಂದು ಬೇಳೂರು ಇದೇ ವೇಳೆ ಸವಾಲು ಹಾಕಿದ್ದಾರೆ.

ಕಾಂಗ್ರೆಸ್ ಸಂಸದ ಡಿ.ಕೆ ಸುರೇಶ್, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಕಾಂಗ್ರೆಸ್ ಎಂಎಲ್‌ಸಿ ಸಿ.ಎಂ ಲಿಂಗಪ್ಪ ಹಾಗೂ ಇತರ ಕಾಂಗ್ರೆಸ್ ಮುಖಂಡರು ಶಿವಕುಮಾರ್ ಮೇಲಿನ ಐಟಿ ದಾಳಿಯನ್ನು ತೀವ್ರವಾಗಿ ಖಂಡಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News