×
Ad

ಶಾಸಕ ಯತೀಂದ್ರ ಸಿದ್ದರಾಮಯ್ಯರಿಗೆ ಅಧಿಕಾರಿಗಳು ಬೆಂಬಲ ನೀಡಿ: ಸಂಸದ ಧ್ರುವನಾರಾಯಣ

Update: 2018-06-20 22:06 IST

ಮೈಸೂರು,ಜೂ.20: ವರುಣಾ ಕ್ಷೇತ್ರದ ಶಾಸಕ ಡಾ.ಯತಿಂದ್ರ ಸಿದ್ದರಾಮಯ್ಯ ಅವರು ಅತೀ ಹೆಚ್ಚು ಮತಗಳಿಂದ ಜಯಗಳಿಸಿದ ಶಾಸಕರಾಗಿದ್ದು, ನೂತನ ಶಾಸಕರಿಗೆ ಅಧಿಕಾರಿಗಳ ಬೆಂಬಲ ಬೇಕಿದೆ ಎಂದು ಸಂಸದ ಧ್ರುವನಾರಾಯಣ ತಿಳಿಸಿದರು.

ವರುಣಾ ಕ್ಷೇತ್ರದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಬುಧವಾರ ಪಾಲ್ಗೊಂಡು ಮಾತನಾಡಿ ಶಾಸಕರೊಂದಿಗೆ ಒಟ್ಟುಗೂಡಿ ಕೆಲಸ ನಿರ್ವಹಿಸಿ. ಮಾಜಿ ಸಿಎಂ ಸಿದ್ದರಾಮಯ್ಯ ಹೆಚ್ಚು ಅನುದಾನ ನೀಡಿ ಅಭಿವೃದ್ಧಿ ಕೆಲಸ ಮಾಡಿದ್ದಾರೆ. ವೈದ್ಯರಾಗಿದ್ದ ಯತೀಂದ್ರ ಅವರು ರಾಜಕಾರಣಕ್ಕೆ ಕಾರಣಾಂತರಗಳಿಂದ ಬಂದಿದ್ದಾರೆ. ಸಾಕಷ್ಟು ಅನುಭವ ಉಳ್ಳವರಾಗಿದ್ದಾರೆ. ನಿಮ್ಮೆಲ್ಲರ ಬೆಂಬಲದೊಂದಿಗೆ ಕ್ಷೇತ್ರದಲ್ಲಿ ಅಭಿವೃದ್ಧಿ ಕೆಲಸಗಳನ್ನು ನಿರ್ವಹಿಸಿ ಎಂದು ವಿವಿಧ ಇಲಾಖೆಯ ಅಧಿಕಾರಿಗಳಿಗೆ ಕಿವಿ ಮಾತು ಹೇಳಿದರು. 

ಡಾ.ಯತೀಂದ್ರ ಸಿದ್ದರಾಮಯ್ಯ ಮಾತನಾಡಿ ನೀವು ನನಗೆ ಸಂಪೂರ್ಣ ಸಹಕಾರ ನೀಡಿ ಕ್ಷೇತ್ರದ ಅಭಿವೃದ್ಧಿಗೆ ಶ್ರಮಿಸೋಣ. ನನಗೆ ಧ್ರುವನಾರಾಯಣ ಮಾರ್ಗದರ್ಶನ ನೀಡುತ್ತಾರೆ. ಸಂಸದರ ಮಾರ್ಗದರ್ಶನದಲ್ಲಿ ನಾವೆಲ್ಲ ಒಟ್ಟಿಗೆ ಸೇರಿ ಕ್ಷೇತ್ರದ ಅಭಿವೃದ್ಧಿಗೆ ಸಹಕರಿಸೋಣ ಎಂದರು.

ಸಭೆಯಲ್ಲಿ ತಾಪಂ ಇಓ ಲಿಂಗರಾಜಯ್ಯ, ತಹಶೀಲ್ದಾರ್ ಮೋಹನ್ ಕುಮಾರ್, ತಾಪಂ ಅಧ್ಯಕ್ಷೆ ಕಾಳಮ್ಮ ಕೆಂಪರಾಮಯ್ಯ ಸೇರಿದಂತೆ ತಾಲೂಕು ಮಟ್ಟದ ಅಧಿಕಾರಿಗಳು ಪಾಲ್ಗೊಂಡಿದ್ದರು. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News