ಕಸವಿಲೇವಾರಿಯಲ್ಲಿ ಮಾಫಿಯ ಕೈವಾಡ ಮಟ್ಟ ಹಾಕಲು ಸೂಕ್ತ ಕ್ರಮ: ಡಾ.ಜಿ.ಪರಮೇಶ್ವರ್

Update: 2018-06-21 16:13 GMT

ಬೆಂಗಳೂರು, ಜೂ.21: ಕಸ ವಿಲೇವಾರಿ ವಿಚಾರದಲ್ಲಿ ಮಾಫಿಯಾಗಳ ಕೈವಾಡವಿರುವುದು ಸರಕಾರದ ಗಮನಕ್ಕೆ ಬಂದಿದ್ದು, ಅದನ್ನು ಮಟ್ಟ ಹಾಕುವ ನಿಟ್ಟಿನಲ್ಲಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಉಪಮುಖ್ಯಂತ್ರಿ ಹಾಗೂ ಬೆಂಗಳೂರು ನಗರಾಭಿವೃದ್ಧಿ ಸಚಿವ ಡಾ.ಜಿ. ಪರಮೇಶ್ವರ್ ತಿಳಿಸಿದರು.

ಗುರುವಾರ ನಗರದ ಸ್ವಾತಂತ್ರ ಉದ್ಯಾನದ ಬಳಿ ನಿರ್ಮಿಸುತ್ತಿರುವ ಬಹುಮಹಡಿ ಪಾರ್ಕಿಂಗ್ ಕಟ್ಟಡ ಹಾಗೂ ಜೆಸಿ ನಗರದಲ್ಲಿ ನಿರ್ಮಿಸಿರುವ ಬಹುಮಹಡಿ ವಾಹನ ಕಟ್ಟಡಗಳನ್ನು ಪರಿಶೀಲನೆ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಸದ ಮಾಫಿಯಾ ಬಗ್ಗೆ ಈಗಾಗಲೇ ಸರಕಾರದ ಗಮನಕ್ಕೆ ಬಂದಿದೆ ಎಂದರು.

ಬಿಬಿಎಂಪಿ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಪೌರಕಾರ್ಮಿಕರು, ಗುತ್ತಿಗೆದಾರರು, ವಿದ್ಯತ್ ನಿರ್ವಾಹಕರು ಸೇರಿ ಹಲವರು ಬಾಕಿ ಬಿಲ್ ಪಾವತಿಸುವಂತೆ ಪ್ರತಿಭಟನೆಗಳನ್ನು ಮಾಡುತ್ತಿದ್ದಾರೆ. ಈ ಸಂಬಂಧ ಪಾಲಿಕೆ ಆಯುಕ್ತರೊಂದಿಗೆ ಮಾತನಾಡಿದ್ದು, ಯಾವ ಇಲಾಖೆಯಲ್ಲೂ ಬಾಕಿ ಬಿಲ್ ಉಳಿಸಿಕೊಳ್ಳದೆ ಎಲ್ಲವನ್ನೂ ಪಾವತಿ ಮಾಡಲು ಸೂಚಿಸಿದ್ದೇನೆ ಎಂದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News