ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದಲ್ಲಿ 1,600 ಮಂದಿಯಿಂದ ಯೋಗ

Update: 2018-06-21 16:29 GMT

ಮೂಡುಬಿದಿರೆ, ಜೂ. 21: ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ವಿವಿಧ ಶಿಕ್ಷಣ ಸಂಸ್ಥೆಗಳ 1,600 ಮಂದಿ ವಿದ್ಯಾರ್ಥಿಗಳು, ಆಳ್ವಾಸ್ ನ್ಯಾಚುರೋಪತಿ ಹಾಗೂ ಯೋಗಿಕ್ ಸೈನ್ಸ್ ಕಾಲೇಜು ಆಶ್ರಯದಲ್ಲಿ ವಿಶ್ವ ಯೋಗ ದಿನಾಚರಣೆ ಅಂಗವಾಗಿ ಆಳ್ವಾಸ್ ನುಡಿಸಿರಿ ಸಭಾಭವನದಲ್ಲಿ ಗುರುವಾರ 55 ನಿಮಿಷಗಳ ಕಾಲ ಯೋಗಾಸನ ಮಾಡಿದರು.

ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಯೋಗ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ನ್ಯಾಚುರೋಪತಿ ಹಾಗೂ ಯೋಗಿಕ್ ಸೈನ್ಸ್ ಕಾಲೇಜು ಪ್ರಾಂಶುಪಾಲೆ ಡಾ. ವನಿತಾ ಶೆಟ್ಟಿ, ವಿವಿಧ ಕಾಲೇಜುಗಳ ಪ್ರಾಂಶುಪಾಲರು, ಆಳ್ವಾಸ್ ಶಾಲೆಗಳ ಮುಖ್ಯ ಶಿಕ್ಷಕರು ಉಪಸ್ಥಿತರಿದ್ದರು. ಯೋಗಾಸನ ಕಾರ್ಯಕ್ರವನ್ನು ಡಾ.ಎಂ ಮೋಹನ ಆಳ್ವ ನೆರವೇರಿಸಿದರು. ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ವಿವಿಧ ಸಂಸ್ಥೆಗಳ ವಿದ್ಯಾರ್ಥಿಗಳು ಯೋಗಾಸನ ಮಾಡಿದರು.

ಯೋಗ ಶಿಕ್ಷಕಿ ಲವಿಟಾ ನಿರ್ದೇಶಕರಾಗಿ ಪಾಲ್ಗೊಂಡರು. ಗ್ರೀಷ್ಮಾ ರೈ ಸಭಾ ಕಾರ್ಯಕ್ರಮ ನಿರೂಪಿಸಿದರು. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News