×
Ad

ಮಡಿಕೇರಿ: ಶಾರ್ಟ್ ಸರ್ಕ್ಯೂಟ್‍ನಿಂದ ಮನೆಗೆ ಹಾನಿ

Update: 2018-06-21 22:17 IST

ಮಡಿಕೇರಿ, ಜೂ.21: ವಿದ್ಯುತ್ ಶಾರ್ಟ್ ಸರ್ಕ್ಯೂಟ್‍ನಿಂದಾಗಿ ಮನೆಯಲ್ಲಿ ಬೆಂಕಿ ಕಾಣಿಸಿಕೊಂಡು ಮನೆ ಸಾಮಗ್ರಿಗಳು ಸಂಪೂರ್ಣ ಸುಟ್ಟು ಹೋದ ಘಟನೆ ನಗರದ ಚಾಮುಂಡೇಶ್ವರಿ ನಗರದಲ್ಲಿ ನಡೆದಿದೆ.

ಪ್ರಮೀಳಾ ಎಂಬುವವರ ಮನೆಯಲ್ಲಿ ಕಳೆದ ರಾತ್ರಿ 12.30 ಗಂಟೆ ಸುಮಾರಿಗೆ ಈ ಘಟನೆ ನಡೆದಿದ್ದು, ಅಗ್ನಿಶಾಮಕ ದಳ ಬೆಂಕಿಯನ್ನು ನಿಯಂತ್ರಿಸಿತು. ನಗರಸಭಾ ಅಧಿಕಾರಿಗಳು ಸ್ಥಳ ಪರಿಶೀಲನೆ ನಡೆಸಿದ್ದು, ಸುಮಾರು 3 ಲಕ್ಷ ರೂ. ನಷ್ಟ ಸಂಭವಿಸಿದೆ. ಮಡಿಕೇರಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮನೆಯಲ್ಲಿ ಯಾರೂ ಇಲ್ಲದ ಸಂದರ್ಭ ಈ ಘಟನೆ ನಡೆದಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News