ಮಂಗಳೂರು: ಜೂ.23ರಂದು ಉದ್ಯೋಗ ಮೇಳ
ಮಂಗಳೂರು, ಜೂ.21: ದ.ಕ. ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಿಂದ ಜೂ.23ರಂದು ‘ಉದ್ಯೋಗ ಮೇಳ‘ವನ್ನು ಆಯೋಜಿಸಿದ್ದು, ವಿವಿಧ ಖಾಸಗಿ ಕಂಪೆನಿಗಳಲ್ಲಿ ಖಾಲಿಯಿರುವ ಹುದ್ದೆಗಳಿಗೆ ಸಂದರ್ಶನವನ್ನು ಆಯೋಜಿಸಲಾಗಿದೆ.
ಎಸೆಸೆಲ್ಸಿ, ಪಿಯುಸಿ, ಐಟಿಐ, ಡಿಪ್ಲೋಮಾ, ಪದವಿ ಮತ್ತು ಸ್ನಾತಕೋತ್ತರ ವಿದ್ಯಾರ್ಹತೆಗಳನ್ನು ಹೊಂದಿರುವ ಆಸಕ್ತ ಅಭ್ಯರ್ಥಿಗಳು ಈ ಉದ್ಯೋಗ ಮೇಳದಲ್ಲಿ ಭಾಗವಹಿಸಬಹುದಾಗಿದೆ.
ಉದ್ಯೋಗಾಂಕ್ಷಿಗಳಿಗಾಗಿ ಒಂದು ಉತ್ತಮ ಉಚಿತ ಸದಾವಕಾಶವನ್ನು ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ಒದಗಿಸಿದ್ದು, ಪ್ರತಿ ಅಭ್ಯರ್ಥಿಗಳು ಸಾಕಷ್ಟು ಪ್ರಮಾಣದ ಬಯೋಡಾಟಗಳೊಂದಿಗೆ ಪಾಸ್‌ಪೋರ್ಟ್ ಅಳತೆಯ ಭಾವಚಿತ್ರದೊಂದಿಗೆ ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಇದರ ಸದುಪಯೋಗವನ್ನು ಪಡೆಯಬಹುದು.
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಮಂಗಳೂರು ದೂ.ಸಂ.: 08242457139ನ್ನು ಸಂಪರ್ಕಿಸಬಹುದು.
ಉದ್ಯೋಗ ಮೇಳ ನಡೆಯುವ ಸ್ಥಳ: ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಮಂಗಳೂರು ಮಹಾನಗರಪಾಲಿಕೆ ಕಟ್ಟಡ, ಲಾಲ್‌ಬಾಗ್, ಮಂಗಳೂರು. ಜೂ.23 ರಂದು ಬೆಳಗ್ಗೆ 10 ರಿಂದ 3 ಗಂಟೆವರೆಗೆ ಸಂದರ್ಶನ ನಡೆಸಲಿದೆ ಎಂದು ಪ್ರಕಟನೆ ತಿಳಿಸಿದೆ.