ಕೊಳ್ಳೇಗಾಲ: ಸಾಮೂಹಿಕ ಯೋಗ ಪ್ರದರ್ಶನ ಕಾರ್ಯಕ್ರಮ

Update: 2018-06-21 17:20 GMT

ಕೊಳ್ಳೇಗಾಲ,ಜೂ.21: ಪಟ್ಟಣದ ಎಂ.ಜಿ.ಎಸ್.ವಿ ಸರ್ಕಾರಿ ಪದವಿ ಪೂರ್ವ ಕಾಲೇಜು ಮೈದಾನದಲ್ಲಿ ಗುರುವಾರ 4ನೇ ವಿಶ್ವ ಯೋಗ ದಿನಾಚರಣೆ ಅಂಗವಾಗಿ ವಿಶೇಷ ಬೃಹತ್ ಸಾಮೂಹಿಕ ಯೋಗ ಪ್ರದರ್ಶನ ನಡೆಯಿತು.

ಆಯುಷ್ ಮಂತ್ರಾಲಯ, ಭಾರತ ಸರ್ಕಾರ, ಕೇಂದ್ರೀಯ ಯೋಗ ಮತ್ತು ಪ್ರಕೃತಿ ಚಿಕಿತ್ಸಾ ಸಂಶೋಧನಾ ಸಂಸ್ಥೆ, ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ್ರಕೃತಿ ಚಿಕಿತ್ಸೆ ಮತ್ತು ಯೋಗ ವಿಜ್ಞಾನಗಳ ಮಹಾವಿದ್ಯಾಲಯ, ತಾಲೂಕು ಆಡಳಿತ, ನಗರಸಭೆ, ಶ್ರೀ ಪತಂಜಲಿ ಯೋಗ ಶಿಕ್ಷಣ ಸಮಿತಿ, ರೋಟರಿ ಸಂಸ್ಥೆ, ಲಯನ್ಸ್, ಭಾರತ ವಿಕಾಸ ಪರಿಷತ್ ಸಂಯುಕ್ತಾಶ್ರಯದಲ್ಲಿ ನಡೆದ ಬೃಹತ್ ಯೋಗ ಪ್ರದರ್ಶನ ಕಾರ್ಯಕ್ರಮವನ್ನು ನಗರಸಭೆ ಅಧ್ಯಕ್ಷ ರಮೇಶ್ ಉದ್ಘಾಟಿಸಿದರು.

ನಂತರ ಮಾತನಾಡಿದ ಅವರು, ಆರೋಗ್ಯ ವೃದ್ಧಿಯಾಗಲು ಯೋಗ ಅವಶ್ಯಕತೆ ಇದೆ. ಯೋಗ ದಿನಕ್ಕೆ ಸೀಮಿತಗೊಳಿಸದೆ ವರ್ಷವಿಡಿ ನಿರಂತರವಾಗಿ ಯೋಗವನ್ನು ಮಾಡುವಂತೆ ಕಿವಿಮಾತು ಹೇಳಿದರು.

ಪತಂಜಲಿ ಯೋಗ ಶಿಕ್ಷಣ ಸಮಿತಿ ಸದಸ್ಯರು, ವಿವಿಧ ಸಂಘ ಸಂಸ್ಥೆಗಳ ಸದಸ್ಯರು, ಪಟ್ಟಣದ ವಿವಿಧ ಶಾಲಾ ಕಾಲೇಜಿನ 1200ಕ್ಕೂ ಹೆಚ್ಚು ವಿದ್ಯಾರ್ಥಿಗಳು ಯೋಗ ಪ್ರದರ್ಶನದಲ್ಲಿ ಪಾಲ್ಗೊಂಡರು. ಶ್ರೀಕ್ಷೇತ್ರ ಧರ್ಮಸ್ಥಳ ಮಂಜುನಾಥೇಶ್ವರ ಪ್ರಕೃತಿ ಚಿಕಿತ್ಸೆ ಮತ್ತು ಯೋಗ ವಿಜ್ಞಾನಗಳ ಮಹಾವಿದ್ಯಾಲಯದ ಯೋಗ ಶಿಕ್ಷಕರಾದ ಕೆ.ಎಸ್. ಪವನ್, ನಿಳಿಲ್ ದಿಲೀಪ್ ಪಾಟಿಲ್ ಯೋಗಾಭ್ಯಾಸ ಕಾರ್ಯಕ್ರಮ ನಡೆಸಿಕೊಟ್ಟರು.

ತಹಶೀಲ್ದಾರ್ ಕಾಮಾಕ್ಷಮ್ಮ, ಡಿ.ವೈ.ಎಸ್‍ಪಿ. ಪುಟ್ಟಮಾದಯ್ಯ, ಸರ್ಕಲ್ ಇನ್‍ಸ್ಪೆಕ್ಟರ್ ಡಿ.ಜಿ. ರಾಜಣ್ಣ, ಬಿಆರ್.ಸಿ ಮಂಜುಳಾ, ಪತಂಜಲಿ ಯೋಗ ಶಿಕ್ಷಣ ಸಮಿತಿ ಅಧ್ಯಕ್ಷ ಎಚ್.ಎಸ್. ನಟರಾಜನ್, ಕಾರ್ಯದರ್ಶಿ ಪಿ. ಮಂಜುನಾಥ್, ಸಂಚಾಲಕಿ ಜಗದಾಂಬ ಜಗದೀಶ್,  ರೋಟರಿ ಸಂಸ್ಥೆ ನಿಯೋಜಿತ ಅಧ್ಯಕ್ಷರಾದ ಪ್ರೇಮಲತಾ ಕೃಷ್ಣಸ್ವಾಮಿ, ಲಯನ್ಸ್ ಸಂಸ್ಥೆ ಆನಂದರಾಮಶೆಟ್ಟಿ, ರೋಟರಿ ಮಿಡ್‍ಟೌನ್ ಅಧ್ಯಕ್ಷ ಪ್ರದೀಪ್ ಫೆರ್ನಾಂಡಿಸ್, ಭಾರತ ವಿಕಾಸ ಪರಿಷತ್ ಅಧ್ಯಕ್ಷ ಡಿ.ವೆಂಕಟಾಚಲ ಸೇರಿದಂತೆ ಇತರರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News