ಕಮಲ್ ಹಾಸನ್‌ರಿಂದ ಸೋನಿಯಾ ಭೇಟಿ

Update: 2018-06-21 17:31 GMT

ಹೊಸದಿಲ್ಲಿ, ಜೂ. 21: ಮಕ್ಕಳ್ ನೀಧಿ ಮೈಯಾಮ್ ಅಧ್ಯಕ್ಷ ಕಮಲ್ ಹಾಸನ್ ಗುರುವಾರ ಹೊಸದಿಲ್ಲಿಯಲ್ಲಿ ಯುಪಿಎ ಅಧ್ಯಕ್ಷೆ ಸೋನಿಯಾ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ ಹಾಗೂ ತಮಿಳುನಾಡಿನ ರಾಜಕೀಯ ಪರಿಸ್ಥಿತಿ ಬಗ್ಗೆ ಚರ್ಚೆ ನಡೆಸಿದ್ದಾರೆ.

ಬುಧವಾರ ಅವರು ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಅವರನ್ನು ಹೊಸದಿಲ್ಲಿಯ ಅವರ ನಿವಾಸದಲ್ಲಿ ಭೇಟಿಯಾಗಿದ್ದರು ಹಾಗೂ ಇದೇ ವಿಷಯದ ಕುರಿತು ಚರ್ಚೆ ನಡೆಸಿದ್ದರು. ‘‘ನಾನು ಸೋನಿಯಾ ಗಾಂಧಿ ಅವರನ್ನು ಭೇಟಿಯಾಗಿದ್ದೇನೆ ಹಾಗೂ ತಮಿಳುನಾಡಿನ ರಾಜಕೀಯ ಪರಿಸ್ಥಿತಿ ಬಗ್ಗೆ ಮಾತುಕತೆ ನಡೆಸಿದ್ದೇನೆ’’ ಎಂದು ಕಮಲ್ ಹಾಸನ್ ಸುದ್ದಿಗಾರರಿಗೆ ತಿಳಿಸಿದ್ದಾರೆ. 2019ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯನ್ನು ಸೋಲಿಸಲು ಪ್ರತಿಪಕ್ಷಗಳನ್ನು ಒಂದೇ ವೇದಿಕೆಯಲ್ಲಿ ಸಂಘಟಿಸುವ ಕಾಂಗ್ರೆಸ್ ಪ್ರಯತ್ನಕ್ಕೆ ಬೆಂಬಲ ನೀಡುವಿರೋ ಎಂಬ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಕಮಲ್ ಹಾಸನ್, ಇದನ್ನು ಈಗ ನಿರ್ಧರಿಸಲು ಸಾಧ್ಯವಿಲ್ಲ ಎಂದಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News