×
Ad

ಎಕ್ಕೂರು ಜಂಕ್ಷನ್‌ನಲ್ಲಿ ಬಸ್ ಢಿಕ್ಕಿ: ಬೈಕ್‌ ಸವಾರನಿಗೆ ಗಾಯ

Update: 2018-06-21 23:14 IST

ಮಂಗಳೂರು, ಜೂ.21: ನಗರದ ಎಕ್ಕೂರು ಜಂಕ್ಷನ್ ಸಮೀಪದಲ್ಲಿ ಖಾಸಗಿ ಬಸ್ಸೊಂದು ಬೈಕ್‌ಗೆ ಢಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರನಿಗೆ ಗಂಭೀರ ಗಾಯಗಳಾದ ಘಟನೆ ನಡೆದಿದೆ.

ರಾಬರ್ಟ್ ನೆಟ್ಟೊ ಅಪಘಾತದಲ್ಲಿ ಗಾಯಗೊಂಡವರು.  ರಾಬರ್ಟ್ ನೆಟ್ಟೊ ಬೈಕ್ ಚಲಾಯಿಸಿಕೊಂಡು ಎಕ್ಕೂರು ಜಂಕ್ಷನ್ ಕಡೆಗೆ ತೆರಳುತ್ತಿದ್ದರು. ಮಂಗಳೂರಿನಿಂದ ತೊಕ್ಕೊಟ್ಟು ಕಡೆಗೆ ಅತಿವೇಗ ಹಾಗೂ ಅಜಾಗರೂಕತೆಯಿಂದ ಬಸ್ ಚಲಾಯಿಸಿಕೊಂಡು ಬಂದ ಚಾಲಕ ಬೈಕ್‌ನ್ನು ಹಿಂದಿಕ್ಕುವ ಭರದಲ್ಲಿ ಬೈಕ್‌ಗೆ ಢಿಕ್ಕಿ ಹೊಡೆಸಿದ್ದಾನೆ. ಪರಿಣಾಮ ಬೈಕ್ ಸಮೇತ ಸವಾರ ರಸ್ತೆಗೆಸೆಯಲ್ಪಟ್ಟಿದ್ದಾನೆ. ಈ ವೇಳೆ ಬೈಕ್ ಸವಾರನಿಗೆ ಗಂಭೀರ ಗಾಯಗಳಾಗಿದ್ದು, ಘಟನೆಯಲ್ಲಿ ಬೈಕ್ ಸಂಪೂರ್ಣ ಜಖಂಗೊಂಡಿದೆ. ತಕ್ಷಣ ಗಾಯಾಳನ್ನು ಖಾಸಗಿ ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ ಎಂದು ಸ್ಥಳೀಯರು ಮಾಹಿತಿ ನೀಡಿದ್ದಾರೆ.

ಇದೇ ವೇಳೆ ಬಸ್‌ಗಾಗಿ ಕಾಯುತ್ತಿದ್ದ ಮಹಿಳೆಯೊಬ್ಬರಿಗೆ ಬಸ್ ಢಿಕ್ಕಿಯಾಗಿ ಅವರಿಗೂ ಸಣ್ಣಪುಟ್ಟ ಗಾಯಗಳಾಗಿವೆ. ಅಪಘಾತಕ್ಕೆ ಕಾರಣನಾದ ಬಸ್ ಚಾಲಕ ವಾಹನವನ್ನು ನಿಲ್ಲಿಸದೇ ಸ್ಥಳದಿಂದ ಪರಾರಿಯಾಗಿದ್ದಾನೆ ಎಂದು ತಿಳಿದುಬಂದಿದೆ. ಈ ಕುರಿತು ಸಂಚಾರ ದಕ್ಷಿಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News