ಅಕ್ರಮ ಗೋಸಾಗಾಟ ಶಂಕೆಯಲ್ಲಿ ವ್ಯಕ್ತಿಯ ಥಳಿಸಿ ಹತ್ಯೆ: ಫೋಟೊ ವೈರಲ್ ಆದ ಮೇಲೆ ಕ್ಷಮೆ ಯಾಚಿಸಿದ ಪೊಲೀಸರು

Update: 2018-06-22 06:52 GMT

ಹಾಪುರ್, ಜೂ.22: ಅಕ್ರಮ ಗೋಸಾಗಾಟ ಶಂಕೆಯಲ್ಲಿ ವ್ಯಕ್ತಿಯೊಬ್ಬನನ್ನು ಗುಂಪೊಂದು ಥಳಿಸಿ ಹತ್ಯೆಗೈದ ಪ್ರಕರಣಕ್ಕೆ ಸಂಬಂಧಿಸಿದ ಫೋಟೊವೊಂದು ವೈರಲ್ ಆದ ನಂತರ ಉತ್ತರ ಪ್ರದೇಶ ಪೊಲೀಸರು ಕ್ಷಮೆ ಯಾಚಿಸಿದ್ದಾರೆ.

ಇಲ್ಲಿನ ಹಾಪುರ್ ಜಿಲ್ಲೆಯ ಬಝೇರಾ ಗ್ರಾಮದಲ್ಲಿ ಈ ಘಟನೆ ನಡೆದಿತ್ತು. ಪೊಲೀಸರ ಸಮ್ಮುಖದಲ್ಲೇ ಗಂಭೀರವಾಗಿ ಗಾಯಗೊಂಡ ಖಾಸಿಂರನ್ನು ಗುಂಪಿನಲ್ಲಿದ್ದ ದುಷ್ಕರ್ಮಿಗಳು ಎಳೆದುಕೊಂಡು ಹೋಗುತ್ತಿರುವ ಫೋಟೊ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು.

ಆದರೆ ಪೊಲೀಸರ ಮುಂದೆಯೇ ಖಾಸಿಂರನ್ನು ಎಳೆದುಕೊಂಡು ಹೋಗಲಾಗಿದೆ ಎನ್ನುವ ಆರೋಪಗಳನ್ನು ಹಾಪುರ್ ಎಸ್ಪಿ ಸಂಕಲ್ಪ್ ಶರ್ಮಾ ನಿರಾಕರಿಸಿದ್ದಾರೆ. ಈ ಘಟನೆಗೆ ಸಂಬಂಧಿಸಿ ಉತ್ತರ ಪ್ರದೇಶ ಪೊಲೀಸ್ ಟ್ವಿಟರ್ ನಲ್ಲಿ ಕ್ಷಮೆ ಯಾಚಿಸಿದೆ.

"ಈ ಘಟನೆಯಲ್ಲಿ ಪೊಲೀಸ್ ಸಿಬ್ಬಂದಿ ಸೂಕ್ಷ್ಮವಾಗಿ ಸಂವೇದನಾಶೀಲರಾಗಿ ವರ್ತಿಸಬೇಕಾಗಿತ್ತು. ಸರಿಯಾದ ರೀತಿಯಲ್ಲಿ ಗಾಯಾಳುವನ್ನು ಕರೆದುಕೊಂಡು ಹೋಗಬೇಕಾಗಿತ್ತು" ಎಂದು ಟ್ವೀಟ್ ನಲ್ಲಿ ತಿಳಿಸಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News