×
Ad

ಕಾಶ್ಮೀರದ ಮೂರು ಜಿಲ್ಲೆಗಳಲ್ಲಿ ಮೊಬೈಲ್ ಅಂತರ್ಜಾಲ ಸೇವೆ ಕಡಿತ

Update: 2018-06-22 19:35 IST

ಶ್ರೀನಗರ,ಜೂ.22: ಕಾನೂನು ಮತ್ತು ಸುವ್ಯವಸ್ಥೆಯನ್ನು ಕಾಯ್ದುಕೊಳ್ಳಲು ಮುನ್ನೆಚ್ಚರಿಕೆ ಕ್ರಮವಾಗಿ ಕಾಶ್ಮೀರ ಕಣಿವೆಯ ಶ್ರೀನಗರ,ಅನಂತನಾಗ್ ಮತ್ತು ಪುಲ್ವಾಮಾ ಜಿಲ್ಲೆಗಳಲ್ಲಿ ಶುಕ್ರವಾರ ಮೊಬೈಲ್ ಅಂತರ್ಜಾಲ ಸೇವೆಗಳನ್ನು ಕಡಿತಗೊಳಿಸಲಾಗಿದೆ.

ಅನಂತನಾಗ್ ಜಿಲ್ಲೆಯಲ್ಲಿ ಶುಕ್ರವಾರ ಭದ್ರತಾಪಡೆಗಳೊಂದಿಗಿನ ಗುಂಡಿನ ಕಾಳಗದಲ್ಲಿ ಇಸ್ಲಾಮಿಕ್ ಸ್ಟೇಟ್ ಜಮ್ಮು-ಕಾಶ್ಮೀರಕ್ಕೆ ಸೇರಿದವರೆನ್ನಲಾದ ಇಬ್ಬರು ಉಗ್ರರು ಕೊಲ್ಲಲ್ಪಟ್ಟಿದ್ದು, ಈ ಪೈಕಿ ಓರ್ವ ಶ್ರೀನಗರದ ನಿವಾಸಿ ಎನ್ನಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News