×
Ad

ತಣ್ಣೀರುಬಾವಿ: ನಿಯಂತ್ರಣ ತಪ್ಪಿ ನದಿಗೆ ಬಿದ್ದು ಮುಳುಗಿದ ಕಾರು

Update: 2018-06-22 20:45 IST

ಮಂಗಳೂರು, ಜೂ.22: ಕೇರಳದಿಂದ ತಣ್ಣೀರುಬಾವಿ ಬೀಚ್‌ಗೆ ಬಂದಿದ್ದ ವಿದ್ಯಾರ್ಥಿಗಳ ಕಾರೊಂದು ನಿಯಂತ್ರಣ ತಪ್ಪಿ ನದಿಗೆ ಬಿದ್ದು ಮುಳುಗಿದ ಘಟನೆ ಶುಕ್ರವಾರ ನಡೆದಿದೆ.

ಈ ಸಂದರ್ಭ ಕಾರಿನಲ್ಲಿದ್ದ ಇಬ್ಬರು ನೀರಿನಲ್ಲಿ ಮುಳುಗಿ ನದಿ ಪಾಲಾಗುತಿದ್ದುದನ್ನು ಕಂಡ ಕಸಬ ಬೆಂಗ್ರೆ ನಿವಾಸಿ ಇಕ್ಬಾಲ್ ಎಂಬವರ ಪುತ್ರ ಇಜಾಝ್ ತನ್ನ ಜೀವವನ್ನು ಲೆಕ್ಕಿಸದೆ ನದಿಗೆ ಹಾರಿ ಇಬ್ಬರನ್ನು ರಕ್ಷಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಕೇರಳದಿಂದ ಬಂದಿದ್ದ ವಿದ್ಯಾರ್ಥಿಗಳ ಬಾಡಿಗೆ ಕಾರು ಬ್ರೇಕ್ ವಿಫಲಗೊಂಡು ಚಾಲಕನ ನಿಯಂತ್ರಣ ತಪ್ಪಿ ನದಿಗೆ ಬಿದ್ದಿರುವುದಾಗಿ ತಿಳಿದುಬಂದಿದೆ.

ಈ ಕುರಿತು ಸಂಚಾರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News