×
Ad

ಉಡುಪಿ: ಬುಡಕಟ್ಟು ಸಮುದಾಯಕ್ಕೆ ಕ್ರೀಡಾ ತರಬೇತಿ

Update: 2018-06-22 21:00 IST

ಉಡುಪಿ, ಜೂ.22: ಕೇಂದ್ರದ ಬುಡಕಟ್ಟು ವ್ಯವಹಾರಗಳ ಮಂತ್ರಾಲಯದ ಆದೇಶದ ಮೇರೆಗೆ ರಾಜ್ಯದಲ್ಲಿರುವ ಪರಿಶಿಷ್ಟ ಪಂಗಡದ ಬುಡಕಟ್ಟು ಸಮುದಾಯದಲ್ಲಿರುವ ಕ್ರೀಡಾಪಟುಗಳಿಗೆ ಅವರು ಆಸಕ್ತಿ ಹೊಂದಿರುವ ಕ್ರೀಡೆಗಳಲ್ಲಿ ಉತ್ತಮ ರೀತಿಯಲ್ಲಿ ಪ್ರೋತ್ಸಾಹಿಸುವ ಸಲುವಾಗಿ ತರಬೇತಿಯನ್ನು ನೀಡಲಾಗುತ್ತದೆ.

ಇದಕ್ಕಾಗಿ ಒಳಾಂಗಣ, ಹೊರಾಂಗಣ ಕ್ರೀಡೆಗಳು, ರಾಜ್ಯಮಟ್ಟದ ಮತ್ತು ರಾಷ್ಟ್ರಮಟ್ಟದ ಕ್ರೀಡೆಗಳಲ್ಲಿ ಭಾಗವಹಿಸಿರುವ, ಪ್ರಶಸ್ತಿ ಪಡೆದಿರುವ ಕ್ರೀಡಾಪಟು ಗಳನ್ನು ಗುರುತಿಸಿ, ಅವರ ಪ್ರತಿಭೆಗಳನ್ನು ಸಾಕಾರಗೊಳಿಸಲು ಉದ್ದೇಶಿಸಲಾಗಿದೆ.

ಇಂತಹ ಬುಡಕಟ್ಟು ಸಮುದಾಯಗಳ ಯುವ ಕ್ರೀಡಾ ಪ್ರತಿಭೆಗಳಿಗೆ ರಾಜ್ಯ ಹಾಗೂ ರಾಷ್ಟ್ರ ಮಟ್ಟದಲ್ಲಿ ಭಾರತೀಯ ಕ್ರೀಡಾ ಪ್ರಾಧಿಕಾರದಿಂದ (ಎಸ್‌ಎಐ) ತರಬೇತಿ ನೀಡುವ ಉದ್ದೇಶವಿದ್ದು, ಅರ್ಹತೆ ಹೊಂದಿರುವ ರಾಜ್ಯದ ಪರಿಶಿಷ್ಟ ಪಂಗಡದ ಬುಡಕಟ್ಟು ಸಮುದಾಯದ ಕ್ರೀಡಾಪಟುಗಳು ಸ್ವವಿವರವುಳ್ಳ ಮಾಹಿತಿಯನ್ನು ನಿರ್ದೇಶಕರು, ಕರ್ನಾಟಕ ರಾಜ್ಯ ಬುಡಕಟ್ಟು ಸಂಶೋಧನಾ ಸಂಸ್ಥೆ, ಮೈಸೂರು (ದೂರವಾಣಿ:0821-2560274/75) ಇ- ಮೇಲ್: trimysore@gmail.com-ಗೆ ನೀಡುವಂತೆ ಪ್ರಕಟಣೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News