×
Ad

ಬಿಬಿಎಂಪಿ ಸಭೆಯಲ್ಲಿ ಮತದಾರರಿಗೆ ಕೃತಜ್ಞತೆ ಸಲ್ಲಿಸಿದ ಶಾಸಕಿ ಸೌಮ್ಯರೆಡ್ಡಿ

Update: 2018-06-22 21:26 IST

ಬೆಂಗಳೂರು, ಜೂ.22: ಜಯನಗರ ವಿಧಾನಸಭಾ ಕ್ಷೇತ್ರದ ಶಾಸಕಿ ಸೌಮ್ಯರೆಡ್ಡಿ ತಮ್ಮನ್ನು ಆಯ್ಕೆ ಮಾಡಿದ ಮತದಾರರಿಗೆ ಹಾಗೂ ಸಹಕರಿಸಿದ ಬಿಬಿಎಂಪಿ ಸದಸ್ಯರಿಗೆ ಬಿಬಿಎಂಪಿ ಮಾಸಿಕ ಸಭೆಯಲ್ಲಿ ಕೃತಜ್ಞತೆ ಸಲ್ಲಿಸಿದರು.

ಶುಕ್ರವಾರ ನಗರದ ಬಿಬಿಎಂಪಿ ಕೇಂದ್ರ ಕಚೇರಿಯ ಕೆಂಪೇಗೌಡ ಪೌರ ಸಭಾಂಗಣದಲ್ಲಿ ನಡೆದ ಮಾಸಿಕ ಸಭೆಯಲ್ಲಿ ಪಾಲ್ಗೊಂಡು ಮತನಾಡಿದ ಅವರು, ನಗರದಲ್ಲಿ ಸಾಕಷ್ಟು ಅಭಿವೃದ್ಧಿ ಕೆಲಸಗಳು ಬಾಕಿ ಇವೆ ಎಂದರು.

ಈ ವೇಳೆ ಪಾಲಿಕೆ ಸದಸ್ಯೆ ಮಾಲತಿ ಸೋಮಶೇಖರ್ ಮಾತನಾಡಿ, ಜಯನಗರದಲ್ಲಿ ಸಾಕಷ್ಟು ಅಭಿವೃದ್ಧಿ ಕೆಲಸಗಳಾಗಿವೆ. ನೀವು ಈ ರೀತಿ ಆರೋಪ ಮಾಡುವ ಮೂಲಕ ದಿ.ಮಾಜಿ ಶಾಸಕರಾದ ವಿಜಯ್ ಕುಮಾರ್‌ಗೆ ಅವಮಾನಿಸುತ್ತಿದ್ದೀರಿ ಎಂದರು.

ಇದಕ್ಕೆ ಪ್ರತಿಕ್ರಿಯಿಸಿದ ಸೌಮ್ಯರೆಡ್ಡಿ, ನಾನು ನಗರದ ಅಭಿವೃದ್ಧಿ ವಿಷಯ ಮಾತನಾಡುತ್ತಿದ್ದೇನೆ. ನನಗೂ ವಿಜಯ್ ಕುಮಾರ್ ಬಗ್ಗೆ ಗೌರವವಿದ್ದು, ಜಯನಗರ ಕ್ಷೇತ್ರದ ಜನ ನನ್ನನ್ನು ಶಾಸಕಿಯಾಗಿ ಆಯ್ಕೆ ಮಾಡಿದ್ದಾರೆ. ಹೀಗಾಗಿ, ನನಗೆ ಕ್ಷೇತ್ರದ ಅಭಿವೃದ್ಧಿ ಮುಖ್ಯ ಎಂದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News