×
Ad

ಮೀಟರ್ ಬಡ್ಡಿ ದಂಧೆ ಆರೋಪ: ಮಹಿಳೆ ಆತ್ಮಹತ್ಯೆ

Update: 2018-06-23 18:19 IST

ಬೆಂಗಳೂರು, ಜೂ.23: ಮೀಟರ್ ಬಡ್ಡಿ ದಂಧೆಗೆ ಮಹಿಳೆಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಇಲ್ಲಿಕೆ ಸಿ.ಕೆ.ಅಚ್ಚುಕಟ್ಟು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ನಗರದ ಉತ್ತರಹಳ್ಳಿಯ ಪ್ರಜ್ಞಾಪೂರ್ಣ ಲೇಔಟ್ ನಿವಾಸಿ ಉಮಾ ಆತ್ಮಹತ್ಯೆ ಮಾಡಿಕೊಂಡಿರುವ ಮಹಿಳೆ ಎಂದು ಪೊಲೀಸರು ತಿಳಿಸಿದ್ದಾರೆ.

ರೌಡಿಶೀಟರ್ ಮಹಿಳೆ ಯಶಸ್ವಿನಿ ಎಂಬಾಕೆಯ ಬಳಿ ಉಮಾ 2ರಿಂದ 3 ಲಕ್ಷ ರೂ. ಸಾಲ ಪಡೆದುಕೊಂಡು ಬಡ್ಡಿ ಕಟ್ಟುತ್ತಿದ್ದರು. ಆದರೆ, ಹೆಚ್ಚುವರಿ ಬಡ್ಡಿ ನೀಡುವಂತೆ ಒತ್ತಡ ಹಾಕಿದ್ದಲ್ಲದೆ, ಮನೆ ಬಳಿ ಗಲಾಟೆ ನಡೆಸಿದ್ದ ಕಾರಣ ನೊಂದ ಉಮಾ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎನ್ನಲಾಗಿದ್ದು, ಅಲ್ಲದೇ ಆತ್ಮಹತ್ಯೆ ಮಾಡಿಕೊಂಡಿರುವ ವಿಡಿಯೋ ವೈರಲ್ ಆಗಿದೆ ಎಂದು ಹೇಳಲಾಗುತ್ತಿದೆ.

ಪ್ರಕರಣ ಸಂಬಂಧ ಮೊಕದ್ದಮೆ ದಾಖಲಿಸಿಕೊಂಡಿರುವ ಪೊಲೀಸರು, ಮೃತ ದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ವಿಕ್ಟೋರಿಯಾ ಆಸ್ಪತ್ರೆಗೆ ರವಾನಿಸಿ, ತನಿಖೆ ಕೈಗೊಂಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News