ತಮಿಳುನಾಡಿನಲ್ಲಿ ವೈದ್ಯಕೀಯ ಕೋರ್ಸ್‌ನ ಕೌನ್ಸೆಲಿಂಗ್‌ಗೆ ಆಧಾರ್ ಕಡ್ಡಾಯ:ಹೈಕೋರ್ಟ್
ಚೆನ್ನೈ,ಜೂ,23: ತಮಿಳುನಾಡಿನಲ್ಲಿ ವೈದ್ಯಕೀಯ ಶಿಕ್ಷಣಕ್ಕೆ ಪ್ರವೇಶಕ್ಕಾಗಿ ಕೌನ್ಸೆಲಿಂಗ್ ಸಂದರ್ಭ ಆಧಾರ್ ಕಾರ್ಡ್ ಮತ್ತು ಅದರ ಛಾಯಾಪ್ರತಿಯನ್ನು ಸಲ್ಲಿಸುವುದು ಕಡ್ಡಾಯವಾಗಿದೆ ಎಂದು ಮದ್ರಾಸ್ ಉಚ್ಚ ನ್ಯಾಯಾಲಯವು ಶನಿವಾರ ಸ್ಪಷ್ಟ ಪಡಿಸಿತು.
ತಮಿಳುನಾಡಿನ ಹೊರಗಿನ ವಿದ್ಯಾರ್ಥಿಗಳಿಗೆ ಅವರ ಜನ್ಮಸ್ಥಳದ ದಾಖಲೆಗಳನ್ನು ಪರಿಶೀಲಿಸದೆ ವೈದ್ಯಕೀಯ ಕೋರ್ಸ್‌ಗಳಿಗೆ ಪ್ರವೇಶ ನೀಡಲಾಗುತ್ತಿದೆ ಎಂದು ಆರೋಪಿಸಿ ಸಲ್ಲಿಸಲಾಗಿರುವ ಅರ್ಜಿಗಳಿಗೆ ಸಂಬಂಧಿಸಿದಂತೆ ಮಧ್ಯಂತರ ಆದೇಶಗಳನ್ನು ಹೊರಡಿಸಿದ ನ್ಯಾ.ಎನ್.ಕೃಪಾಕರನ್ ಅವರು,ಅಂತಹ ವಿದ್ಯಾರ್ಥಿಗಳಿಂದ ಆಧಾರ ಕಾರ್ಡ್‌ಗಳನ್ನು ಪಡೆಯುವಂತೆ ವೈದ್ಯಕೀಯ ಶಿಕ್ಷಣ ಅಧಿಕಾರಿಗಳಿಗೆ ನಿರ್ದೇಶ ನೀಡಿದರು. ಇದರಿಂದ ಹೊರಗಿನ ವಿದ್ಯಾರ್ಥಿಗಳು ರಾಜ್ಯ ಕೋಟಾದಡಿ ಪ್ರವೇಶಗಳನ್ನು ಪಡೆಯುವುದನ್ನು ತಡೆಯಲು ಸಾಧ್ಯವಾಗುತ್ತದೆ ಎಂದರು.
ತಮಿಳುನಾಡಿನ ಹೊರಗಿನ ವಿದ್ಯಾರ್ಥಿಗಳಿಗೆ ಅವರ ಜನ್ಮಸ್ಥಳದ ಕುರಿತ ನಕಲಿ ದಾಖಲೆಗಳ ಆಧಾರದಲ್ಲಿ ಎಂಬಿಬಿಎಸ್‌ಗೆ ಪ್ರವೇಶಗಳನ್ನು ನೀಡಲಾಗುತ್ತಿದೆ ಮತ್ತು ಇದರಿಂದಾಗಿ ರಾಜ್ಯದ ವಿದ್ಯಾರ್ಥಿಗಳು ಅವಕಾಶವಂಚಿತರಾಗುತ್ತಿದ್ದಾರೆ ಎಂದು ಅರ್ಜಿದಾರರು ಆರೋಪಿಸಿದ್ದಾರೆ.