×
Ad

ಕೊರಗ ಕುಟುಂಬಗಳಿಗೆ ಲೇಔಟ್ ನಿರ್ಮಾಣ: ಜಿಲ್ಲಾಧಿಕಾರಿ

Update: 2018-06-23 21:31 IST

ಉಡುಪಿ, ಜೂ.23: ಪಡುಬಿದ್ರೆ ಗ್ರಾಪಂ ವ್ಯಾಪ್ತಿಯ ಪಾದೆಬೆಟ್ಟು ಗ್ರಾಮದಲ್ಲಿ 19 ಕೊರಗ ಕುಟುಂಬಗಳಿಗೆ ಲೇಔಟ್ ಮಾದರಿಯಲ್ಲಿ ಮನೆ ನಿರ್ಮಾಣ ಮಾಡಲಾಗುವುದು ಎಂದು ಜಿಲ್ಲಾಧಿಕಾರಿ  ಪ್ರಿಯಾಂಕ ಮೇರಿ ಫ್ರಾನ್ಸಿಸ್ ಹೇಳಿದ್ದಾರೆ.

ಶನಿವಾರ ಮಣಿಪಾಲದಲ್ಲಿರುವ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಮೂಲ ನಿವಾಸಿ ಅಭಿವೃದ್ದಿ ಯೋಜನೆಯಲ್ಲಿ ಜಿಲ್ಲೆಯ ಕೊರಗ ಸಮುದಾಯ ದವರಿಗೆ ವಸತಿ ಸೌಲ್ಯಕ್ಕಾಗಿ ಬಿಡುಗಡೆಯಾಗಿರುವ ಅನುದಾನದಲ್ಲಿ ಪಡುಬಿದ್ರೆ ಗ್ರಾಪಂ ವ್ಯಾಪ್ತಿಯ ಪಾದೆಬೆಟ್ಟು ಗ್ರಾಮದ 19 ಕೊರಗ ಕುಟುಂಬ ಗಳಿಗೆ ತಲಾ 2 ಲಕ್ಷ ರೂ.ಗಳ ಸಹಾಯಧನ ಮಂಜೂರಾತಿ ಆದೇಶ ಪತ್ರ ವಿತರಿಸಿ ಅವರು ಮಾತನಾಡುತಿದ್ದರು.

ಕೊರಗ ಕುಟುಂಬಗಳಿಗೆ ಮನೆ ನಿರ್ಮಾಣಕ್ಕಾಗಿ ಪ್ರಸ್ತುತ ನೀಡಿರುವ ಸಹಾಯಧನದ ಜೊತೆಗೆ ಬ್ಯಾಂಕ್‌ಗಳ ಮೂಲಕ ಅಗತ್ಯ ನೆರವು ಪಡೆದು ನಿರ್ಮಿತಿ ಕೇಂದ್ರದ ಮೂಲಕ ಲೇಔಟ್ ಮಾದರಿಯಲ್ಲಿ ಸುಂದರವಾಗಿ ಮನೆ ನಿರ್ಮಾಣ ಮಾಡಲಾಗುುದು ಎಂದು ಜಿಲ್ಲಾಧಿಕಾರಿ ಹೇಳಿದರು.

ಕಾರ್ಯಕ್ರಮದಲ್ಲಿ ಕೊರಗ ಮುಖಂಡರಾದ ಗಣೇಶ್ ಕೊರಗ, ಗಣೇಶ್ ಬಾರ್ಕೂರು, ಐಟಿಡಿಪಿ ಇಲಾಖೆಯ ಅಧಿಕಾರಿ ವಿಶ್ವನಾಥ್ ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News