×
Ad

ಜೂ. 24: ವಿದ್ಯಾರ್ಥಿಗಳಿಗೆ ಸಿಇಟಿ, ನೀಟ್ ಮಾರ್ಗದರ್ಶನ ಶಿಬಿರ

Update: 2018-06-23 22:20 IST

ಮಂಗಳೂರು, ಜೂ. 23: ಸೇವ್ ಲೈಫ್ ಫೌಂಡೇಶನ್ ಕರ್ನಾಟಕ ಇದರ ಆಶ್ರಯದಲ್ಲಿ ಸಿಇಟಿ ಮತ್ತು ನೀಟ್ ಪ್ರವೇಶ ಪರೀಕ್ಷೆ ಬರೆದಿರುವ ವಿದ್ಯಾರ್ಥಿಗಳಿಗೆ ಕೌನ್ಸಿಲಿಂಗ್ ಪೂರ್ವ ಮಾರ್ಗದರ್ಶನ ಶಿಬಿರ ಹಮ್ಮಿಕೊಳ್ಳಲಾಗಿದೆ.

ಜೂ. 24 ರಂದು ಸಂಜೆ  4.30ಕ್ಕೆ ಶಿವಮೊಗ್ಗದ ಆಲ್ಕೊಳ ಸರ್ಕಲ್ ಬಳಿಯ ಚೈತನ್ಯ ಸೋಶಿಯಲ್ ವರ್ಕ್ ಸೆಂಟರ್ ನಲ್ಲಿ ಶಿಬಿರ ನಡೆಯಲಿದ್ದು, ಮಂಗಳೂರಿನ ಕರಿಯರ್ ಗೈಡೆನ್ಸ್ ಎಂಡ್ ಇನ್ಫೊರ್ಮೇಶನ್ ಸೆಂಟರ್ ನ ಸ್ಥಾಪಕಾಧ್ಯಕ್ಷ ಉಮರ್ ಯು.ಹೆಚ್. ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಲಿದ್ದಾರೆ.

ಶಿಬಿರದಲ್ಲಿ ವೈದ್ಯಕೀಯ, ದಂತ ವೈದ್ಯಕೀಯ, ಆಯುರ್ವೇದ, ಯುನಾನಿ, ಹೋಮಿಯೋಪಥಿ, ಯೋಗ - ನ್ಯಾಚುರೋರಪಥಿ, ಬಿ. ಫಾರ್ಮ, ಫಾರ್ಮ ಡಿ., ಇಂಜಿನೀಯರಿಂಗ್ ಮತ್ತು ಫಾರ್ಮ್ ಸಾಯನ್ಸ್ ನ ವಿವಿಧ ಕೋರ್ಸುಗಳಿಗೆ ನಡೆಯಲಿರುವ ಆನ್‍ಲೈನ್ ಸಿಇಟಿ/ನೀಟ್ ಕೌನ್ಸಿಲಿಂಗ್‍ನ ವಿಧಾನ, ದಾಖಲಾತಿ ಪರಿಶೀಲನೆ, ಬೇಕಾಗಿರುವ ಅಗತ್ಯ ದಾಖಲೆಗಳು, ಸೀಟುಗಳ ಆಯ್ಕೆ ಪ್ರಕ್ರಿಯೆ ಮತ್ತು ಪಿಯುಸಿ ಬಳಿಕ ಕಲಿಕೆಗಿರುವ ಅವಕಾಶಗಳ ಬಗ್ಗೆ ಪೂರಕ ಮಾಹಿತಿ ನೀಡಲಾಗುವುದು.

ಪ್ರವೇಶ ಉಚಿತವಾಗಿದ್ದು, ಆಸಕ್ತರು ಹೆಸರು ನೋಂದಾವಣೆಗಾಗಿ ಮೊ.ಸಂ. 8317474045 (ರಾಜು ಆರ್., ಪ್ರಧಾನ ಕಾರ್ಯದರ್ಶಿ) ಅಥವಾ 9482498556 (ಸವಿತಾ ಸಂಪತ್, ಉಪಾಧ್ಯಕ್ಷೆ)ಗೆ ಕರೆ ಮಾಡಬಹುದಾಗಿದೆ ಎಂದು ಸೇವ್ ಲೈಫ್ ಫೌಂಡೇಶನ್ ನ ಸ್ಥಾಪಕಾಧ್ಯಕ್ಷ ಉಮರ್ ಯು.ಹೆಚ್. ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News