ಅಧಿಕಾರ ಇದ್ದಿದ್ದರೆ ನಿರ್ಲಕ್ಷ್ಯ ತೋರಿದ ಅಧಿಕಾರಿಗಳನ್ನು ಅಮಾನತು ಮಾಡುತ್ತಿದ್ದೆ: ಶಿವಮೂರ್ತಿ ಶಿವಾಚಾರ್ಯ ಶ್ರೀ

Update: 2018-06-23 17:17 GMT

ದಾವಣಗೆರೆ,ಜೂ.23: ಜನಪ್ರತಿನಿಧಿಗಳಿಗೆ ಇರುವ ಅಧಿಕಾರ ನನಗಿದ್ದಿದ್ದರೆ ಈ ಕ್ಷಣವೇ ನಿರ್ಲಕ್ಷ್ಯ ತೋರಿದ ಅಧಿಕಾರಿಗಳನ್ನು ಅಮಾನತ್ತು ಮಾಡುತ್ತಿದ್ದೆ ಎಂದು ತರಳಬಾಳು ಬೃಹನ್ಮಠದ ಡಾ. ಶಿವಮೂರ್ತಿ ಶಿವಾಚಾರ್ಯ ಶ್ರೀಗಳು ಅಸಮಾಧಾನ ವ್ಯಕ್ತಪಡಿಸಿದರು.

ಶನಿವಾರ ಹರಿಹರ ತಾಲೂಕಿನ ರಾಜನಹಳ್ಳಿ ಜಾಕ್‍ವೆಲ್‍ಗೆ ಶಾಸಕರಾದ ಎಸ್.ಎ. ರವೀಂದ್ರನಾಥ್, ಎಸ್.ವಿ. ರಾಮಚಂದ್ರ ಹಾಗೂ ಪ್ರೊ. ಲಿಂಗಣ್ಣ ಅವರೊಂದಿಗೆ ಭೇಟಿ ನೀಡಿದ ಅವರು, ಕಾಮಗಾರಿ ಕಳಪೆ ಮಾಡಿರುವ ನೀರಾವರಿ ಹಾಗೂ ಎಲ್ ಅಂಡ್ ಟಿ ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.  ಕಳೆದ 20 ದಿನಗಳಿಂದ ತುಂಗಭದ್ರಾ ನದಿಯಲ್ಲಿ ಹೆಚ್ಚಿನ ನೀರು ಹರಿಯುತ್ತಿದ್ದರೂ 22 ಕೆರೆಗಳಿಗೆ ನೀರು ತುಂಬಿಸಿಕೊಳ್ಳುವಲ್ಲಿ ಅಧಿಕಾರಿಗಳು ಸಂಪೂರ್ಣ ಅಸಡ್ಡೆ ತೋರಿದ್ದಾರೆ ಎಂದು ಅವರು ಅಸಮಾಧಾನ ವ್ಯಕ್ತಪಡಿಸಿದರು.

ಎಲ್ ಅಂಡ್ ಟಿ ಕಂಪನಿಯವರು ಈ ಕಾಮಗಾರಿ ನಿರ್ವಹಿಸುತ್ತಿದ್ದು, ಆದರೂ ನಿರ್ಲಕ್ಷ್ಯ ವಹಿಸಿದ್ದಾರೆ ಎಂದು ಸ್ವಾಮೀಜಿ ಹೇಳಿದರು. ಆದರೆ, ಇದಕ್ಕೆ ಅಧಿಕಾರಿಗಳು ಮೌನಕ್ಕೆ ಶರಣಾದರು. ಈ ವೇಳೆ ಶ್ರೀಗಳು ಸ್ಥಳದಲ್ಲಿದ್ದ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡಿದ್ದಲ್ಲದೇ, ಸ್ಥಳದಲ್ಲಿದ್ದ ಜನಪ್ರತಿನಿಧಿಗಳಿಗೆ, ನಿಮ್ಮಂತೆ ಅಧಿಕಾರವಿದ್ದಿದ್ದರೆ ಈ ಕೂಡಲೇ ಅಧಿಕಾರಿಗಳನ್ನು ಅಮಾನತು ಮಾಡಿಬಿಡುತ್ತಿದ್ದೆ ಎಂದರು.

ಈ ಸಂದರ್ಭದಲ್ಲಿ 22 ಕೆರೆಗಳ ಏತನೀರಾವರಿ ಹೋರಾಟ ಸಮಿತಿ ಅಧ್ಯಕ್ಷ ಡಾ. ಮಂಜುನಾಥ ಗೌಡ, ಚಂದ್ರನಾಯ್ಕ ಮತ್ತಿತರರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News