ಸಿದ್ದರಾಮಯ್ಯಗೆ ಸಂಪುಟ ದರ್ಜೆ ಸ್ಥಾನಮಾನ?

Update: 2018-06-24 08:11 GMT

ಬೆಂಗಳೂರು, ಜೂ.24: ಮಾಜಿ ಮುಖ್ಯಮಂತ್ರಿ ಹಾಗೂ ಸಮ್ಮಿಶ್ರ ಸರಕಾರದ ಸಮನ್ವಯ ಸಮಿತಿಯ ಅಧ್ಯಕ್ಷರಾಗಿರುವ ಸಿದ್ದರಾಮಯ್ಯರಿಗೆ ಸಂಪುಟ ದರ್ಜೆ ಸ್ಥಾನಮಾನ ನೀಡಲು ನಿರ್ಧರಿಸಲಾಗಿದೆ ಎಂದು ವರದಿಯಾಗಿದೆ.

ಸುದ್ದಿಗಾರರೊಂದಿಗೆ ರವಿವಾರ ಮಾತನಾಡಿದ ಉಪ ಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ್ ಈ ವಿಷಯವನ್ನು ತಿಳಿಸಿದ್ದಾರೆ. ಈ ಕುರಿತು ಮುಖ್ಯಮಂತ್ರಿ ಎಚ್‌ಡಿ ಕುಮಾರಸ್ವಾಮಿ ನಿರ್ಧಾರ ಕೈಗೊಂಡಿದ್ದಾರೆ ಎಂದು ಸ್ಪಷ್ಟಪಡಿಸಿದ್ದಾರೆ.

ಸಿಎಂ ಕುಮಾರಸ್ವಾಮಿ ಅವರು ಮಾಜಿ ಸಿಎಂ ಸಿದ್ದರಾಮಯ್ಯಗೆ ಕ್ಯಾಬಿನೆಟ್ ದರ್ಜೆ ಸ್ಥಾನಮಾನ ನೀಡುವ ಕುರಿತು ಸೋಮವಾರ ಸಂಜೆಯೊಳಗೆ ಅಧಿಕೃತ ಆದೇಶ ಹೊರಬರುವ ಸಾಧ್ಯತೆಯಿದೆ ಎನ್ನಲಾಗಿದೆ.

 ಸಮನ್ವಯ ಸಮಿತಿ ಅಧ್ಯಕ್ಷರಾಗಿರುವ ಸಿದ್ದರಾಮಯ್ಯರಿಗೆ ಸರಕಾರ ಈಗಾಗಲೇ ವಿಧಾನ ಸೌಧದ ಕೊಠಡಿಯನ್ನು ನೀಡಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News