×
Ad

'ಸಿದ್ದರಾಮಯ್ಯ ವಿವಾದಾತ್ಮಕವಾಗಿ ಮಾತನಾಡಿಲ್ಲ'

Update: 2018-06-24 19:49 IST

ಮಂಗಳೂರು, ಜೂ.24: ಸಾಲಮನ್ನಾ, ಬಜೆಟ್ ಮಂಡನೆ ವಿಚಾರದಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಯಾವುದೇ ವಿವಾದಾತ್ಮಕ ಹೇಳಿಕೆ ನೀಡಿಲ್ಲ. ಶನಿವಾರ ಬೆಳಗ್ಗೆ ತನ್ನ ಜೊತೆ ಚೆನ್ನಾಗಿಯೇ ಮಾತನಾಡಿದ್ದರು ಎಂದು ಉಪಮುಖ್ಯಮಂತ್ರಿ ಜಿ.ಪರಮೇಶ್ವರ್ ಸ್ಪಷ್ಟಪಡಿಸಿದ್ದಾರೆ.

ಪರಮೇಶ್ವರ್ ಅವರು ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದರು.

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಮ್ಮ ನಾಯಕರು. ಅವರನ್ನು ಖಾಸಗಿಯಾಗಿ ಭೇಟಿಯಾಗಲು ಧರ್ಮಸ್ಥಳಕ್ಕೆ ತೆರಳುತ್ತಿದ್ದೇನೆ ಎಂದು ಅವರು ತಿಳಿಸಿದರು. ಮೈತ್ರಿ ಸರಕಾರ ಎಂದರೇನು ಎಂದು ಮಾಧ್ಯಮದವರನ್ನೇ ಪರಮೇಶ್ವರ್ ಪ್ರಶ್ನಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News