ಉಡುಪಿ: ಭಿಕ್ಷೆ ಬೇಡುತ್ತಿದ್ದ ಇಬ್ಬರು ಮಕ್ಕಳ ರಕ್ಷಣೆ

Update: 2018-06-24 16:03 GMT

ಉಡುಪಿ, ಜೂ. 24: ಉಡುಪಿ ಸರ್ವಿಸ್ ಬಸ್ ನಿಲ್ದಾಣದ ಬಳಿ ರವಿವಾರ ಭಿಕ್ಷೆ ಬೇಡುತ್ತಿದ್ದ ಇಬ್ಬರು ಮಕ್ಕಳನ್ನು ಉಡುಪಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಮಕ್ಕಳ ರಕ್ಷಣಾ ಘಟಕದ ನೇತೃತ್ವದಲ್ಲಿ ರಕ್ಷಿಸಿ ನಿಟ್ಟೂರು ಬಾಲ ಮಂದಿರಕ್ಕೆ ಸೇರಿಸಲಾಗಿದೆ.

ಮಕ್ಕಳು ಭಿಕ್ಷೆ ಬೇಡುತ್ತಿರುವ ವಿಚಾರ ತಿಳಿದ ಸಾಮಾಜಿಕ ಕಾರ್ಯಕರ್ತ ರಾದ ನಿತ್ಯಾನಂದ ಒಳಕಾಡು ಹಾಗೂ ತಾರಾನಾಥ್ ಮೇಸ್ತ ಇಲಾಖಾ ಅಧಿಕಾರಿಗಳಿಗೆ ಮಾಹಿತಿ ನೀಡಿದರು. ಕೂಡಲೇ ಮಕ್ಕಳ ರಕ್ಷಣಾ ಘಟಕ, ಪೊಲೀಸ್ ಸಿಬ್ಬಂದಿ ಮತ್ತು ಸಾಮಾಜಿಕ ಕಾರ್ಯಕರ್ತರು ಜಂಟಿ ಕಾರ್ಯ ಚರಣೆ ಮೂಲಕ ಏಳು ಹಾಗೂ ಐದು ವರ್ಷದ ಇಬ್ಬರು ಮಕ್ಕಳನ್ನು ರಕ್ಷಿಸಿದ್ದಾರೆ.

‘ನಿಟ್ಟೂರಿನಲ್ಲಿ ನೆಲೆಸಿರುವ ವಲಸೆ ಕಾರ್ಮಿಕರ ಮಕ್ಕಳನ್ನು ರಕ್ಷಿಸಿ ಬಾಲ ಮಂದಿರಕ್ಕೆ ಸೇರಿಸಲಾಗಿದ್ದು, ಪ್ರತಿದಿನ ನಗರದ ಸರಕಾರಿ ಬಸ್ ನಿಲ್ದಾಣ, ಸರ್ವಿಸ್ ಬಸ್ ನಿಲ್ದಾಣ, ಸಿಟಿ ಬಸ್ ನಿಲ್ದಾಣ ಹಾಗೂ ರಾಜಾಂಗಣ ಪಾರ್ಕಿಂಗ್ ಪ್ರದೇಶದಲ್ಲಿ ಮಕ್ಕಳ ರಕ್ಷಣಾ ಘಟಕದಿಂದ ಕಾರ್ಯಾಚರಣೆ ನಡೆಸ ಲಾಗುತ್ತಿದೆ ಎಂದು ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ನಾಗೇ್ ಶಾನುಭಾಗ್ ಪತ್ರಿಕೆಗೆ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News