ಸಿದ್ದರಾಮಯ್ಯ ವಿರುದ್ಧ ಎಫ್‍ಐಆರ್: ಪ್ರಕರಣ ರದ್ದು ಕೋರಿ ಹೈಕೋರ್ಟ್ ಮೊರೆ ಹೋಗಲು ಜಿಲ್ಲಾ ಕಾಂಗ್ರೆಸ್ ನಿರ್ಧಾರ

Update: 2018-06-24 17:37 GMT

ಮೈಸೂರು,ಜೂ.24: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ನಿವೇಶನ ಹಂಚಿಕೆ ಮತ್ತು ಪರಭಾರೆ ಪ್ರಕರಣದಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ನಾಲ್ವರ ವಿರುದ್ಧ ಕೊನೆಗೂ ಎಫ್‍ಐಆರ್ ದಾಖಲಾಗಿದೆ.

ನಗರದ ಲಕ್ಷ್ಮೀಪುರಂ ಪೊಲೀಸ್ ಠಾಣೆಯಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಮುಡಾ ಮಾಜಿ ಅಧ್ಯಕ್ಷ್ ಸಿ.ಬಸವೇಗೌಡ, ಡಿ.ಧ್ರುವಕುಮಾರ್, ಆಯುಕ್ತ ಕಾಂತರಾಜು ಅವರ ವಿರುದ್ಧ ಮೈಸೂರಿನ 2ನೇ ಹಿರಿಯ ಶ್ರೇಣಿ ಸಿವಿಲ್ ನ್ಯಾಯಾಲಯದ ಆದೇಶದಂತೆ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ.

ಈ ಸಂಬಂಧವಾಗಿ ನಗರ ಪೊಲೀಸ್ ಆಯುಕ್ತ ಡಾ.ಎ.ಸುಬ್ರಮಣ್ಯೇಶ್ವರ ರಾವ್ ಅವರು ಮಾಧ್ಯಮದವರಿಗೆ ಮಾಹಿತಿ ನೀಡಿದ್ದಾರೆ. ಮೈಸೂರಿನ 2ನೇ ಶ್ರೇಣಿ ಸಿವಿಲ್ ನ್ಯಾಯಾಲಯದ ಆದೇಶದಂತೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರದಂತೆ ನಾಲ್ವರ ವಿರುದ್ದ ಲಕ್ಷ್ಮಿಪುರಂ ಪೊಲೀಸ್ ಠಾಣೆಯಲ್ಲಿ ಎಫ್‍ಐಆರ್ ಸಂಖ್ಯೆ 0049/2018ರಲ್ಲಿ ಪ್ರಕರಣ ದಾಖಲಿಸಲಾಗಿತ್ತು. ಈ ಸಂಬಂಧ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ ಎಂದು ಹೇಳಿದ್ದಾರೆ.

ಹೈಕೋರ್ಟ್‍ಗೆ ಮೊರೆ: ಪ್ರಕರಣ ಸಂಬಂಧ ಸೂಕ್ತ ದಾಖಲಾತಿಗಳನ್ನು ಕಲೆ ಹಾಕುತ್ತಿರುವ ಜಿಲ್ಲಾ ಕಾಂಗ್ರೆಸ್, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧದ ಪ್ರಕರಣನ್ನು ರದ್ದುಪಡಿಸುವಂತೆ ಕೋರಿ ಸಿಆರ್‍ಪಿಸಿ 482 ಸೆಕ್ಷನ್ ಆಧಾರದ ಮೇಲೆ ರಾಜ್ಯ ಉಚ್ಚ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಲು ನಿರ್ಧರಿಸಿದೆ ಎಂದು ಅಧ್ಯಕ್ಷ ಡಾ.ಬಿ.ಜೆ.ವಿಜಯಕುಮಾರ್ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News