ಧರ್ಮಸ್ಥಳಕ್ಕೆ ಆಗಮಿಸುತ್ತಿದ್ದ ಸಚಿವ ಝಮೀರ್‌ರ ಹೆಲಿಕಾಪ್ಟರ್ ಅರ್ಧದಿಂದಲೇ ವಾಪಸ್

Update: 2018-06-25 05:19 GMT

ಬೆಳ್ತಂಗಡಿ, ಜೂ.25: ಧರ್ಮಸ್ಥಳಕ್ಕೆ ಆಗಮಿಸುತ್ತಿದ್ದ ರಾಜ್ಯ ಆಹಾರ ಮತ್ತು ನಾಗರಿಕ ಸರಬರಾಜು ಗ್ರಾಹಕರ ವ್ಯವಹಾರ ಸಚಿವ ಝಮೀರ್ ಅಹ್ಮದ್ ಖಾನ್ ಅವರಿದ್ದ ಹೆಲಿಕಾಪ್ಟರ್ ಸಕಲೇಶಪುರದಿಂದಲೇ ಬೆಂಗಳೂರಿಗೆ ವಾಪಸ್ ತೆರಳಿದ ಘಟನೆ ಇಂದು ಬೆಳಗ್ಗೆ ನಡೆದಿದೆ. ಕೆಟ್ಟ ಹವಾಮಾನವೇ ಇದಕ್ಕೆ ಕಾರಣ ಎಂದು ತಿಳಿದುಬಂದಿದೆ.

ಸಚಿವ ಝಮೀರ್ ಅಹ್ಮದ್ ಅವರು ಇಂದು ಧರ್ಮಸ್ಥಳಕ್ಕೆ ಆಗಮಿಸಿ ಇಲಾಖಾ ಅಧಿಕಾರಿಗಳ ಜೊತೆ ಸಭೆ ಸೇರಿದಂತೆ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಬೇಕಿತ್ತು. ಅದಕ್ಕಾಗಿ ಅವರು ಬೆಳಗ್ಗೆ ಹೆಲಿಕಾಪ್ಟರ್ ಮೂಲಕ ಬೆಂಗಳೂರಿನಿಂದ ಹೊರಟಿದ್ದರು. ಆದರೆ ಸಕಲೇಶಪುರ ತಲುಪುತ್ತಿದ್ದಂತೆ ಕೆಟ್ಟ ಹವಾಮಾನ ಹೆಲಿಕಾಪ್ಟರ್ ಹಾರಾಟಕ್ಕೆ ಅಡ್ಡಿಯಾಯಿತೆನ್ನಲಾಗಿದೆ. ಈ ಹಿನ್ನೆಲೆಯಲ್ಲಿ ಹೆಲಿಕಾಪ್ಟರ್ ಅಲ್ಲಿಂದ ಬೆಂಗಳೂರಿಗೆ ಹಿಂದಿರುಗಬೇಕಾಯಿತು. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News