ಹಾಸನ ಜಿಲ್ಲಾಧಿಕಾರಿಯಾಗಿ ಮತ್ತೆ ರೋಹಿಣಿ ಸಿಂಧೂರಿ

Update: 2018-06-25 08:21 GMT

ಬೆಂಗಳೂರು, ಜೂ.25: ಹಾಸನ ಜಿಲ್ಲಾಧಿಕಾರಿಯಾಗಿ ರೋಹಣಿ ಸಿಂಧೂರಿಯವರನ್ನು ಮತ್ತೆ ನಿಯುಕ್ತಿಗೊಳಿಸಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ.

ವರ್ಗಾವಣೆ ಆದೇಶವನ್ನು ಪ್ರಶ್ನಿಸಿ ಹೈಕೋರ್ಟ್ ಮೆಟ್ಟಿಲೇರಿದ್ದ ರೋಹಿಣಿ ಸಿಂಧೂರಿಯವರ ಅರ್ಜಿಯನ್ನು ರಾಜ್ಯ ಹೈಕೋರ್ಟ್ ಸೋಮವಾರ ಇತ್ಯರ್ಥಪಡಿಸಿದ್ದು, ಹಾಸನ ಜಿಲ್ಲಾಧಿಕಾರಿಯಾಗಿ ಮುಂದುವರಿಯುವಂತೆ ಆದೇಶಿಸಿದೆ. ಈ ಹಿನ್ನೆಲೆಯಲ್ಲಿ ರಾಜ್ಯ ಸರಕಾರವು ಅವರನ್ನು ಹಾಸನ ಜಿಲ್ಲಾಧಿಕಾರಿಯಾಗಿ ಮುಂದುವರಿಸಿ ಆದೇಶ ಹೊರಡಿಸಿದೆ.

ಹಾಸನ ಜಿಲ್ಲಾಧಿಕಾರಿ ಹುದ್ದೆಯಿಂದ ರೋಹಣಿಯವರನ್ನು ವರ್ಗಾವಣೆ ಮಾಡಿದ್ದ ಈ ಹಿಂದಿನ ಸಿದ್ದರಾಮಯ್ಯ ನೇತೃತ್ವದ ಸರಕಾರದ ಆದೇಶವನ್ನು ಕೆಎಟಿ(ಕರ್ನಾಟಕ ಆಡಳಿತ ನ್ಯಾಯ ಮಂಡಳಿ) ಎತ್ತಿ ಹಿಡಿದಿತ್ತು. ಈ ಕ್ರಮವನ್ನು ಪ್ರಶ್ನಿಸಿ ಐಎಎಸ್ ಅಧಿಕಾರಿಣಿಯಾಗಿರುವ ರೋಹಿಣಿ ಸಿಂಧೂರಿ ಪುನಃ ಹೈಕೋರ್ಟ್ ಮೆಟ್ಟಿಲೇರಿದ್ದರು. ಅದರ ವಿಚಾರಣೆಯನ್ನು ಹೈಕೋರ್ಟ್ ಇತ್ಯರ್ಥಪಡಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News