ಸಂತ ಆ್ಯಗ್ನೆಸ್ ಕಾಲೇಜಿನಲ್ಲಿ ಸ್ಕಾರ್ಫ್ ವಿವಾದ: ತರಗತಿ ಬಹಿಷ್ಕರಿಸಿ ವಿದ್ಯಾರ್ಥಿನಿಯರ ಪ್ರತಿಭಟನೆ

Update: 2018-06-25 10:27 GMT

ಮಂಗಳೂರು, ಜೂ.25: ನಗರದ ಬೆಂದೂರ್‌ವೆಲ್ ಸಮೀಪದ ಸಂತ ಆ್ಯಗ್ನೆಸ್ ಕಾಲೇಜಿನಲ್ಲಿ ಸ್ಕಾರ್ಫ್ ವಿವಾದ ಉಂಟಾಗಿದ್ದು, ಸೋಮವಾರ ಸಿಎಫ್‌ಐ ನೇತೃತ್ವದಲ್ಲಿ ಕಾಲೇಜಿನಲ್ಲಿ ವಿದ್ಯಾರ್ಥಿನಿಯರು ಪ್ರತಿಭಟನೆ ನಡೆಸಿದರು.

ಶೈಕ್ಷಣಿಕ ವರ್ಷದ ಆರಂಭದಲ್ಲೇ ನಮ್ಮನ್ನು ಸ್ಕಾರ್ಫ್ ಹಾಕದಂತೆ ತಡೆಯೊಡ್ಡುವ ಪ್ರಯತ್ನ ನಡೆಯಿತು. ಆದರೆ ನಾವು ಅದನ್ನು ವಿರೋಧಿಸುತ್ತಲೇ ಬಂದೆವು. ಶಿಕ್ಷಣ ಸಂಸ್ಥೆಯ ನಿಯಮಗಳನ್ನು ಒಪ್ಪಿಕೊಳ್ಳುವಂತೆ ಒತ್ತಾಯಿಸಿದರು. ದಂಡ ವಿಧಿಸುವ ಎಚ್ಚರಿಕೆ ನೀಡಿದರು. ಆ ಹಿನ್ನೆಲೆಯಲ್ಲಿ ತರಗತಿ ಬಹಿಷ್ಕರಿಸಿ ಪ್ರತಿಭಟನೆ ನಡೆಸಿದೆವು ಎಂದು ವಿದ್ಯಾರ್ಥಿನಿಯರು ತಿಳಿಸಿದರು. ಈ ಮಧ್ಯೆ ವಿದ್ಯಾರ್ಥಿನಿಯರು ಹಾಗೂ ಸಿಎಫ್‌ಐ ಮುಖಂಡರ ಸಮ್ಮುಖದಲ್ಲಿ ಕಾಲೇಜಿನ ಪ್ರಾಂಶುಪಾಲರು ಮಾತುಕತೆ ನಡೆಸಿದರೂ ಪ್ರಯೋಜನವಾಗಲಿಲ್ಲ. 

ಈ ಬಗ್ಗೆ ಪ್ರತಿಕ್ರಿಯಿಸಿದ ಸಂತ ಆ್ಯಗ್ನೆಸ್ ಕಾಲೇಜಿನ ಪ್ರಾಂಶುಪಾಲರಾದ ಜೆಸ್ವಿನಾ ಎ.ಸಿ., "ಸಂತ ಆ್ಯಗ್ನೆಸ್ ಕಾಲೇಜು ಅಲ್ಪಸಂಖ್ಯಾತ ಶಿಕ್ಷಣ ಸಂಸ್ಥೆಯಾಗಿದೆ. ಇಲ್ಲಿ ಕಲಿಯುವ ಪ್ರತಿಯೊಬ್ಬ ವಿದ್ಯಾರ್ಥಿಯನ್ನೂ ನಾವು ಗೌರವಿಸುತ್ತೇವೆ. ವಿದ್ಯಾರ್ಥಿಗಳ ಯಾವುದೇ ಸಮಸ್ಯೆಯಿದ್ದಲ್ಲಿ, ಆಡಳಿತವು ವಿದ್ಯಾರ್ಥಿಗಳ ಪೋಷಕರೊಂದಿಗೆ ಹಾಗು ವಿದ್ಯಾರ್ಥಿಗಳೊಂದಿಗೆ ಚರ್ಚಿಸಿ ಪರಿಹರಿಸುತ್ತದೆ" ಎಂದು ಹೇಳಿದ್ದಾರೆ.

Full View

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News