×
Ad

ಗೌರಿ ಲಂಕೇಶ್ ಹತ್ಯೆ ಪ್ರಕರಣ: ವಾಗ್ಮೋರೆಗೆ ಮತ್ತೆ ನ್ಯಾಯಾಂಗ ಬಂಧನ

Update: 2018-06-25 19:51 IST

ಬೆಂಗಳೂರು, ಜೂ.25: ಹಿರಿಯ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣ ಸಂಬಂಧ ಪ್ರಮುಖ ಆರೋಪಿ ಪರಶುರಾಮ್ ವಾಗ್ಮೋರೆಯನ್ನು ಮತ್ತೆ 2 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಆದೇಶಿಸಲಾಗಿದೆ.

ಪೊಲೀಸ್ ವಿಚಾರಣೆ ಅವಧಿ ಮುಕ್ತಾಯವಾದ ಹಿನ್ನೆಲೆ ಸೋಮವಾರ ನಗರದ ಮೂರನೇ ಎಸಿಎಂಎಂ ನ್ಯಾಯಾಲಯಕ್ಕೆ ಪರಶುರಾಮ್ ವಾಗ್ಮೋರೆಯನ್ನು ಸಿಟ್(ಎಸ್‌ಐಟಿ) ತನಿಖಾಧಿಕಾರಿಗಳು ಹಾಜರುಪಡಿಸಿದರು. ಬಳಿಕ ನ್ಯಾಯಾಧೀಶರು, ಜೂ.27 ರ ವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಆದೇಶ ನೀಡಿದರು ಎನ್ನಲಾಗಿದೆ.

ಆರೋಪಿಯ ಗುರುತು ಪತ್ತೆ ಪರೇಡ್ ನಡೆಯದ ಹಿನ್ನೆಲೆಯಲ್ಲಿ ಪರಶುರಾಮ್ ವಾಗ್ಮೋರೆ ಮುಖಕ್ಕೆ ಕಪ್ಪುಬಟ್ಟೆ ಹಾಕಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು. ಇದೇ ಪ್ರಕರಣ ಸಂಬಂಧ ಈಗಾಗಲೇ ಬಂಧನಕ್ಕೊಳಗಾಗಿರುವ ಇತರ ಐವರು ಆರೋಪಿಗಳು ಕೇಂದ್ರ ಕಾರಾಗೃಹ ಪರಪ್ಪನ ಅಗ್ರಹಾರದಲ್ಲಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News