ಶಿಕ್ಷಣ ಮಾಫಿಯಾ ಹೆಚ್ಚಳಕ್ಕೆ ಅಧಿಕಾರಿಗಳೇ ಕಾರಣ: ಮುಖ್ಯ ಕಾರ್ಯದರ್ಶಿ ಕೆ.ರತ್ನಪ್ರಭ
Update: 2018-06-25 19:53 IST
ಬೆಂಗಳೂರು, ಜೂ. 25: ‘ಶಿಕ್ಷಣ ವ್ಯವಸ್ಥೆಯ ಮಾಫಿಯಾ ಹೆಚ್ಚಾಗಲು ಅಧಿಕಾರಿಗಳೇ ಕಾರಣ. ಲೋಪ-ದೋಷಗಳನ್ನು ಸರಿಪಡಿಸುವಲ್ಲಿ ಸರಿಯಾದ ಸಮಯದಲ್ಲಿ ಅಧಿಕಾರಿಗಳು ಕೆಲಸ ಮಾಡಲ್ಲ. ಇದರಿಂದಲೇ ಮಾಫಿಯಾ ಹೆಚ್ಚಾಗಿದೆ ಎಂದು ರಾಜ್ಯ ಸರಕಾರದ ಮುಖ್ಯ ಕಾರ್ಯದರ್ಶಿ ಕೆ.ರತ್ನಪ್ರಭ ಅಸಮಾಧಾನ ಹೊರ ಹಾಕಿದ್ದಾರೆ.
ಸೋಮವಾರ ಈ ಸಂಬಂಧ ಟ್ವಿಟ್ ಮಾಡುವ ಮೂಲಕ ರಾಜ್ಯ ರಾಜಕೀಯ ಹಾಗೂ ಸಾರ್ವಜನಿಕ ವಲಯದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಅಲ್ಲದೆ, ಮುಖ್ಯ ಕಾರ್ಯದರ್ಶಿಯವರ ಈ ಹೇಳಿಕೆ ಅಧಿಕಾರಿಗಳ ವಲಯದಲ್ಲಿಯೂ ಅಚ್ಚರಿ ಮೂಡಿಸಿದೆ.