ಬೆಂಗಳೂರು: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆ

Update: 2018-06-25 14:24 GMT

ಬೆಂಗಳೂರು, ಜೂ.25: ಪೀಣ್ಯದ ದೊಡ್ಡಬಿದರಕಲ್ಲುವಿನಲ್ಲಿ ರವಿವಾರ ರಾತ್ರಿ ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ರಮೇಶ್(40) ಎಂಬುವರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಖಾಸಗಿ ಕಂಪೆನಿಯಲ್ಲಿ ಕೆಲಸಕ್ಕೆ ಹೋಗುತ್ತಿದ್ದ ರಮೇಶ್ ಮನೆಯಲ್ಲಿನ ಜಗಳದಿಂದ ಬೇಸತ್ತು ರಾತ್ರಿ ಮನೆಯಲ್ಲಿ ಎಲ್ಲರೂ ಮಲಗಿದ್ದಾಗ ಫ್ಯಾನ್‌ಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದ್ದು, ಪೀಣ್ಯ ಠಾಣಾ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News