28ರಿಂದ ಬೆಂಗಳೂರಿನಲ್ಲಿ ಹೊರಗುತ್ತಿಗೆ ನೌಕರರಿಂದ ಧರಣಿ
ಕುಂದಾಪುರ, ಜೂ.25: ಸರಕಾರದ ನೇರ ನೇಮಕಾತಿ ಕ್ರಮದಿಂದ ಕೆಲಸ ಕಳೆದುಕೊಳ್ಳುವ ಆತಂಕಕ್ಕೆ ಒಳಗಾಗಿರುವ ಸರಕಾರಿ ಹಾಸ್ಟೆಲ್ ಮತ್ತು ವಸತಿ ಶಾಲಾ ‘ಡಿ’ ವರ್ಗದ ಹೊರಗುತ್ತಿಗೆ ನೌಕರರಿಗೆ ಸೇವಾ ಭದ್ರತೆ, ಸಮಾನ ಕೆಲಸಕ್ಕೆ ಸಮಾನ ವೇತನ, ಇಲಾಖೆಯಿಂದಲೇ ವೇತನ ಪಾವತಿ, ಏಕರೂಪದ ಸೇವಾ ನಿಯಮಾವಳಿ ಹಾಗೂ ಕಾರ್ಮಿಕ ಕಾನೂನುಗಳ ಜಾರಿಗೆ ಒತ್ತಾಯಿಸಿ ಜೂ.28ರಿಂದ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ನಡೆಸಲಿರುವ ಅನಿರ್ಧಿಷ್ಠಾವಧಿ ಧರಣಿ ಮುಷ್ಕರವನ್ನು ಯಶಸ್ವಿಗೊಳಿಸಬೇಕುಎಂದು ಕರ್ನಾಟಕ ರಾಜ್ಯ ಸರಕಾರಿ ಹಾಸ್ಟೆಲ್ ಮತ್ತು ವಸತಿ ಶಾಲಾ ಹೊರಗುತ್ತಿಗೆ ನೌಕರರ ಸಂಘದ ರಾಜ್ಯಾಧ್ಯಕ್ಷ ನಿತ್ಯಾನಂದ ಸ್ವಾಮಿ ಹಾಸ್ಟೆಲ್ ಹೊರುತ್ತಿಗೆ ನೌಕರರಿಗೆ ಕರೆ ನೀಡಿದ್ದಾರೆ.
ಕರ್ನಾಟಕ ರಾಜ್ಯ ಸರಕಾರಿ ಹಾಸ್ಟೆಲ್ ಮತ್ತು ವಸತಿ ಶಾಲಾ ಹೊರಗುತ್ತಿಗೆ ನೌಕರರ ಸಂಘದ ಉಡುಪಿ ಜಿಲ್ಲಾ ಸಮಿತಿ ನೇತೃತ್ವದಲ್ಲಿ ರವಿವಾರ ಕುಂದಾಪುರ ಕಾರ್ಮಿಕ ಭವನದಲ್ಲಿ ನಡೆದ ಬೃಹತ್ ಸಮಾವೇಶವನ್ನು ಉದ್ಘಾಟಿಸಿ ಅರು ಮಾತನಾಡುತಿದ್ದರು.
ಸಮಾಜ ಕಲ್ಯಾಣ, ಹಿಂದುಳಿದ ವರ್ಗಗಳ ಕಲ್ಯಾಣ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಗಳು ನಡೆಸುತ್ತಿರುವ ವಿದ್ಯಾರ್ಥಿ ನಿಲಯಗಳಲ್ಲಿ ಮತ್ತು ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘ ನಡೆಸುತ್ತಿರುವ ವಸತಿ ಶಾಲೆ, ಕಾಲೇಜುಗಳಲ್ಲಿ ಕಳೆದ ಹತ್ತಾರು ವರ್ಷಗಳಿಂದ ಅಡುಗೆ, ಸ್ವಚ್ಚತೆ, ಕಾವಲು ಕಾಯುವುದು ಮುಂತಾದ ಕೆಲಸಗಳನ್ನು ಹೊರಗುತ್ತಿಗೆ ಆಧಾರದಲ್ಲಿ ಮಾಡುತ್ತಾ ಬಂದಿರುವ ದಲಿತ, ಹಿಂದುಳಿದ, ಅಲ್ಪಸಂಖ್ಯಾತ ವರ್ಗಗಳಿಗೆ ಸೇರಿರುವ ಹೊರಗುತ್ತಿಗೆ ನೌಕರರ ಸೇವೆಯನ್ನು ಖಾಯಂ ಮಾಡಿ ಗುತ್ತಿಗೆದಾರರ ಶೋಷಣೆಯಿಂದ ಬಿಡುಗಡೆ ಮಾಡಬೇಕೆಂದು ಸರಕಾರವನ್ನು ಒತ್ತಾಯಿಸುವ ನಿರ್ಣಯವನ್ನು ಸಮಾವೇಶದಲ್ಲಿ ಮಂಡಿಸಿ, ಮುಂದಿನ ಹೋರಾಟಕ್ಕೆ ಅಣಿಯಾಗಲು ಸವಾರ್ನುಮತದಿಂದ ತೀರ್ಮಾನಿಸಲಾಯಿತು.
ಕರ್ನಾಟಕ ರಾಜ್ಯ ಸರಕಾರಿ ಹಾಸ್ಟೆಲ್ ಮತ್ತು ವಸತಿ ಶಾಲಾ ಹೊರಗುತ್ತಿಗೆ ನೌಕರರ ಸಂಘ ಉಡುಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ವೆಂಕಟೇಶ ಕೋಣಿ ಪ್ರಾಸ್ತಾವಿಕವಾಗಿ ಮಾತನಾಡಿ ಬೆಂಗಳೂರು ಚಲೋ ಹೋರಾಟವನ್ನು ುಶಸ್ವಿಗೊಳಿಸಬೇಕೆಂದು ಹೇಳಿದರು.
ಸಂಘಟನೆ ಜಿಲ್ಲಾಧ್ಯಕ್ಷ ಮಂಜುನಾಥ ಮಯ್ಯಡಿ ಬೈಂದೂರು ಸಮಾವೇಶ ಅಧ್ಯಕ್ಷತೆ ವಹಿಸಿದ್ದರು. ಮುಖಂಡರಾದ ಗಜಾನನ ಉಡುಪಿ, ಪ್ರೇಮಾ ಕುಂದಾಪುರ, ಉಯ ಕುಂದಾಪುರ ಉಪಸ್ಥಿತರಿದ್ದರು.