ಜೂ.27ರಂದು ಆಹಾರ ಸುರಕ್ಷತೆ ಬಗ್ಗೆ ಕಾರ್ಯಾಗಾರ

Update: 2018-06-25 15:36 GMT

ಉಡುಪಿ, ಜೂ.25: ಮಣಿಪಾಲ ಕೆಎಂಸಿಯ ಆಹಾರ ಮತ್ತು ಪಥ್ಯ ವಿಭಾಗವು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸಹಯೋಗದೊಂದಿಗೆ ಜೂ.27ರಂದು ಆಹಾರ ಸುರಕ್ಷತೆ ಹಾಗೂ ಸ್ವಚ್ಚ ಆಹಾರ ಪದ್ಧತಿಯ ಕುರಿತಂತೆ ಕಾರ್ಯಾಗಾರವೊಂದನ್ನು ಆಯೋಜಿಸಿದೆ.

ಸಾರ್ವಜನಿಕ ಆರೋಗ್ಯ ಕಾರ್ಯಕ್ರಮ ಹಾಗೂ ಸ್ವಸ್ಥ ಭಾರತ ಯೋಜನೆಯ ಭಾಗವಾಗಿ ಈ ಕಾರ್ಯಾಗಾರವನ್ನು ಆಯೋಜಿಸಲಾಗುತ್ತಿದೆ. ಆಹಾರ ಉದ್ಯಮಕ್ಕೆ ಸಂಬಂಧಿಸಿದವರಿಗೆ ನಡೆಯುವ ಈ ಕಾರ್ಯಗಾರ ಅಪರಾಹ್ನ 2ರಿಂದ ಸಂಜೆ 5ರವರೆಗೆ ನಡೆಯಲಿದೆ.

ಅಪರಾಹ್ನ 2:00ಗಂಟೆಗೆ ನಡೆಯುವ ಉದ್ಘಾಟನಾ ಕಾರ್ಯಕ್ರಮದಲ್ಲಿ ಡಿಎಚ್‌ಓ ಡಾ.ರೋಹಿಣಿ, ಮಾಹೆಯ ಪ್ರೊ ವೈಸ್ ಚಾನ್ಸಲರ್ ಡಾ.ಪೂರ್ಣಿಮಾ ಬಾಳಿಗಾ, ಕೆಎಂಸಿಯ ವೈದ್ಯಕೀಯ ಅಧೀಕ್ಷಕ ಡಾ.ಅವಿನಾಶ್ ಶೆಟ್ಟಿ ಪಾಲ್ಗೊಳ್ಳಲಿದ್ದಾರೆ. ವಿವಿಧ ವಿಭಾಗಗಳ ತಜ್ಞ ವೈದ್ಯರು ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಲಿದ್ದಾರೆ ಎಂದು ಡಾ.ಅವಿನಾಶ್ ಶೆಟ್ಟಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News