ಬೆಂಗಳೂರು: ಜೆಸ್ಕಾಂ ಅಧಿಕಾರಿ ಎಸಿಬಿ ಬಲೆಗೆ
Update: 2018-06-25 22:03 IST
ಬೆಂಗಳೂರು, ಜೂ.25: ವಸತಿ ಕಟ್ಟಡಯೊಂದಕ್ಕೆ ವಿದ್ಯುತ್ ಸಂಪರ್ಕ ಕಲ್ಪಿಸಲು ಲಂಚಕ್ಕೆ ಬೇಡಿಕೆಯಿಟ್ಟ ಆರೋಪದ ಮೇಲೆ ಜೆಸ್ಕಾಂ ಅಧಿಕಾರಿಯೊಬ್ಬರು ಎಸಿಬಿ ಬಲೆಗೆ ಬಿದಿದ್ದಾರೆ.
ರಾಯಚೂರು ಜಿಲ್ಲೆಯ ಜೆಸ್ಕಾಂ ಎಇಇ ಆಗಿರುವ ಎಚ್.ಎಸ್.ಶಿವಗುತ್ತಿ ವಿರುದ್ಧ ಎಸಿಬಿ ಮೊಕದ್ದಮೆ ದಾಖಲಿಸಿದೆ.
ಗುತ್ತಿಗೆದಾರರ ಖಾಸಗಿ ವಸತಿಯುತ ಕಟ್ಟಡಕ್ಕೆ ವಿದ್ಯುತ್ ಸಂಪರ್ಕ ಒದಗಿಸಲು 25 ಸಾವಿರ ರೂ. ಲಂಚ ನೀಡುವಂತೆ ಬೇಡಿಕೆಯಿಟ್ಟಿದ್ದರು. ಈ ಸಂಬಂಧ ಮಾಹಿತಿ ಸಂಗ್ರಹಿಸಿದ ಎಸಿಬಿ, ದಾಳಿ ನಡೆಸಿದಾಗ ಪ್ರಕರಣ ಬೆಳಕಿಗೆ ಬಂದಿದೆ. ಆರೋಪಿ ಶಿವಗುತ್ತಿ ವಿರುದ್ಧ ರಾಯಚೂರು ಎಸಿಬಿ ಠಾಣೆಯಲ್ಲಿ ಮೊಕದ್ದಮೆ ದಾಖಲಾಗಿದ್ದು, ಲಂಚದ ಹಣ ವಶಕ್ಕೆ ಪಡೆದುಕೊಂಡಿದ್ದಾರೆ.