ಚನ್ನಗಿರಿ: ಅನಾರೋಗ್ಯದಿಂದ ಬಳಲುತ್ತಿದ್ದ ಯೋಧ ಮೃತ್ಯು
Update: 2018-06-25 22:26 IST
ಚನ್ನಗಿರಿ,ಜೂ.25: ತಾಲೂಕಿನ ಹನುಮಲಾಪುರ ಗ್ರಾಮದ ಜೈಪುರ ತಾಂಡಾ ನಿವಾಸಿ, ವೀರಯೋಧ ಎಂ. ಜಗದೀಶ್ ತೀವ್ರ ಜ್ವರ ದಿಂದ ಭಾನುವಾರ ರಾತ್ರಿ ಮೃತಪಟ್ಟಿದ್ದಾರೆ.
ಕಳೆದ 5 ವರ್ಷಗಳಿಂದ ಸಿಆರ್‍ಪಿಎಫ್‍ನ ಕೇಂದ್ರ ಕೈಗಾರಿಕಾ ಭದ್ರತಾ ಪಡೆ ಅಸ್ಸಾಂನಲ್ಲಿ ಸೇವೆ ಸಲ್ಲಿಸುತ್ತಿದ್ದ ಜಗದೀಶ್ ಅವರು, ಅನಾರೋಗ್ಯದಿಂದ ಬಳಲುತ್ತಿದ್ದರು. ಅದ್ದರಿಂದ ಜೂ. 4 ರಿಂದ ಆನಾರೋಗ್ಯದ ಕಾರಣಕ್ಕಾಗಿ ರಜೆ ಹಾಕಿ ತಮ್ಮ ಗ್ರಾಮಕ್ಕೆ ಬಂದು ವೈದ್ಯರ ಬಳಿ ಚಿಕಿತ್ಸೆ ಪಡೆಯುತ್ತಿದ್ದರು. ಕಳೆದ ಎರಡು ದಿನಗಳಿಂದ ತೀವ್ರ ಜ್ವರದಿಂದ ಬಳಲುತ್ತಿದ್ದ ಜಗದೀಶ್, ಭಾನುವಾರ ರಾತ್ರಿ ಶಿವಮೊಗ್ಗದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗಿದೆ ಮೃತಪಟ್ಟಿದ್ದಾರೆ.
ಸಕಲ ಸರ್ಕಾರಿ ಗೌರವಗಳೊಂದಿಗೆ ಸ್ವ ಗ್ರಾಮದಲ್ಲಿ ಯೋಧನ ಅಂತ್ಯ ಸಂಸ್ಕಾರ ನಡೆಸಲಾಯಿತು.