ಹುಬ್ಬಳ್ಳಿ: ಕ್ಯಾನ್ಸರ್ ಪೀಡಿತ ಮಹಿಳೆ ಬೆಂಕಿ ಹಚ್ಚಿ ಆತ್ಮಹತ್ಯೆ

Update: 2018-06-25 18:21 GMT

ಹುಬ್ಬಳ್ಳಿ,ಜೂ.25: ಕ್ಯಾನ್ಸರ್ ನಿಂದ ಬಳಲುತ್ತಿದ್ದ ಮಹಿಳೆಯೊಬ್ಬರು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ಹುಬ್ಬಳ್ಳಿ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಬ್ಯಾಹಟ್ಟಿ ಗ್ರಾಮದಲ್ಲಿ ನಡೆದಿದೆ.

ಕಳೆದ ಹಲವಾರು ವರ್ಷಗಳಿಂದ ಕ್ಯಾನ್ಸರ್ ರೋಗದಿಂದ ಬಳಲುತ್ತಿದ್ದ‌ ಫಕೀರವ್ಚ ಕರಡಿಗುಡ್ಡ ರೋಗದ ನೋವು ತಾಳಲಾರದೇ ಮನೆಯಲ್ಲಿ ಯಾರೂ ಇಲ್ಲದ ವೇಳೆ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಇದನ್ನು ಗಮನಿಸಿದ ನೆರೆ ಹೊರೆಯವರು ಮಹಿಳೆಯನ್ನು ರಕ್ಷಿಸಿ ಕಿಮ್ಸ್ ಆಸ್ಪತ್ರೆಗೆ ಸಾಗಿಸಿದ್ದು, ಆದರೆ ರಸ್ತೆ ಮದ್ಯೆ ಮಹಿಳೆ ಮೃತಪಟ್ಟಿದ್ದಾರೆಂದು ತಿಳಿದುಬಂದಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News