ಲೋಕಾಯುಕ್ತ ಕಾಯ್ದೆಯಡಿ ದೂರು ಸಲ್ಲಿಕೆ

Update: 2018-06-25 18:28 GMT

ಉಡುಪಿ, ಜೂ.25: ಕರ್ನಾಟಕ ಲೋಕಾಯುಕ್ತ ಕಾಯ್ದೆ ಅಡಿಯಲ್ಲಿ ವಿಚಾರಣೆ ಬಯಸುವ ಸಾರ್ವಜನಿಕರು ನಿಗದಿತ ಪ್ರಪತ್ರದಲ್ಲಿ ದೂರನ್ನು ಲೋಕಾಯುಕ್ತ ಸಂಸ್ಥೆಗೆ ಸಲ್ಲಿಸಬಹುದು.

ಸಾರ್ವಜನಿಕರಿಗೆ ಅನುಕೂಲವಾಗುವ ದೃಷ್ಠಿಯಿಂದ ಹಾಗೂ ಗಂಭೀರವಲ್ಲದ ಸಮಸ್ಯೆಗಳನ್ನು ಸ್ಥಳದಲ್ಲೇ ಬಗೆಹರಿಸುವ ದೃಷ್ಠಿಯಿಂದ ದೂರು ಅರ್ಜಿಗಳನ್ನು ಜೂ.27ರಂದು ಬೆಳಗ್ಗೆ 11:00ರಿಂದ 12:30ರವರೆಗೆ ಬೈಂದೂರು ಪ್ರವಾಸಿ ಮಂದಿರದಲ್ಲಿ, 28ರಂದು ಬೆಳಗ್ಗೆ 11:00ರಿಂದ 12:30ರವರೆಗೆ ಕುಂದಾಪುರ ಪ್ರವಾಸಿ ಮಂದಿರದಲ್ಲಿ ಹಾಗೂ 30ರಂದು 11:00ರಿಂದ 12:30ರವರೆಗೆ ಕಾರ್ಕಳ ಪ್ರವಾಸಿ ವುಂದಿರದಲ್ಲಿ ಸ್ವೀಕರಿಸಲಾಗುವುದು.

ಸಾರ್ವಜನಿಕರಿಗೆ ಅನುಕೂಲವಾಗುವ ದೃಷ್ಠಿಯಿಂದ ಹಾಗೂ ಗಂಭೀರವಲ್ಲದ ಸಮಸ್ಯೆಗಳನ್ನು ಸ್ಥಳದಲ್ಲೇ ಬಗೆಹರಿಸುವ ದೃಷ್ಠಿಯಿಂದ ದೂರು ಅರ್ಜಿಗಳನ್ನು ಜೂ.27ರಂದು ಬೆಳಗ್ಗೆ 11:00ರಿಂದ 12:30ರವರೆಗೆ ಬೈಂದೂರು ಪ್ರವಾಸಿ ಮಂದಿರದಲ್ಲಿ, 28ರಂದು ಬೆಳಗ್ಗೆ 11:00ರಿಂದ 12:30ರವರೆಗೆ ಕುಂದಾಪುರ ಪ್ರವಾಸಿ ಮಂದಿರದಲ್ಲಿ ಹಾಗೂ 30ರಂದು 11:00ರಿಂದ 12:30ರವರೆಗೆ ಕಾರ್ಕಳ ಪ್ರವಾಸಿ ಮಂದಿರದಲ್ಲಿ ಸ್ವೀಕರಿಸಲಾಗುವುದು. ಉಡುಪಿ ತಾಲೂಕಿಗೆ ಸಂಬಂದಪಟ್ಟಂತೆ ದೂರು ಅರ್ಜಿಗಳನ್ನು ನೀಡುವವರು ನೇರವಾಗಿ ಕರ್ನಾಟಕ ಲೋಕಾಯಕ್ತ ಉಡುಪಿ ಕಚೇರಿಯನ್ನು ಸಂಪರ್ಕಿಸ ಬಹುದು. ಹೆಚ್ಚಿನ ಮಾಹಿತಿಗೆ ಪೊಲೀಸ್ ಉಪಾಧೀಕ್ಷಕರು ಕರ್ನಾಟಕ ಲೋಕಾಯುಕ್ತ ಉಡುಪಿ (ದೂರವಾಣಿ:0820-2527770), ಪೊಲೀಸ್ ನಿರೀಕ್ಷಕರು, ಕರ್ನಾಟಕ ಲೋಕಾಯುಕ್ತ (0820-2536661) ಸಂಪರ್ಕಿಸ ಬಹುದು ಎಂದು ಕರ್ನಾಟಕ ಲೋಕಾಯುಕ್ತದ ಪೊಲೀ್ ಇನ್ಸ್‌ಪೆಕ್ಟರ್‌ರ ಪ್ರಕಟಣೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News