ಸಮ್ಮಿಶ್ರ ಸರಕಾರ ಸುಭದ್ರ: ಸಚಿವ ಯು.ಟಿ.ಖಾದರ್

Update: 2018-06-26 13:13 GMT

ಬೆಂಗಳೂರು, ಜೂ.26: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ‘ಲೋಕಸಭಾ ಚುನಾವಣೆವರೆಗೆ ಮಾತ್ರ ಸಮ್ಮಿಶ್ರ ಸರಕಾರ ಅಧಿಕಾರದಲ್ಲಿರುತ್ತದೆ’ ಎಂದು ಹೇಳಿಕೆ ನೀಡಲು ಸಾಧ್ಯವೇ ಇಲ್ಲ ಎಂದು ವಸತಿ ಹಾಗೂ ನಗರಾಭಿವೃದ್ಧಿ ಸಚಿವ ಯು.ಟಿ.ಖಾದರ್ ಅಭಿಪ್ರಾಯಪಟ್ಟಿದ್ದಾರೆ.

ಮಂಗಳವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ಈ ರೀತಿ ಮಾತನಾಡಿದ್ದಾರೆ ಎಂದು ಹೇಳಲಾಗುತ್ತಿರುವ ವಿಡಿಯೋ ನಾನು ನೋಡಿಲ್ಲ. ಆದುದರಿಂದ, ಅವರ ಆ ರೀತಿ ಹೇಳಿಕೆ ನೀಡಿದ್ದಾರೆ ಎಂಬುದನ್ನು ಒಪ್ಪಲು ಸಾಧ್ಯವಿಲ್ಲ ಎಂದರು.

ಸಮ್ಮಿಶ್ರ ಸರಕಾರವು ಸುಭದ್ರವಾಗಿದೆ, ನಮ್ಮಲ್ಲಿ ಯಾವುದೆ ಗೊಂದಲಗಳಿಲ್ಲ. ರಾಜ್ಯ ಕಾಂಗ್ರೆಸ್‌ನಲ್ಲಿ ಎಲ್ಲರೂ ಒಗ್ಗಟ್ಟಾಗಿದ್ದೇವೆ. ಸರಕಾರ ದೃಢವಾಗಿದ್ದು, ಜನಪರವಾದ ಯೋಜನೆಗಳನ್ನು ಜಾರಿಗೆ ತರಲಿದೆ ಎಂದು ಖಾದರ್ ವಿಶ್ವಾಸ ವ್ಯಕ್ತಪಡಿಸಿದರು.

ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಬಜೆಟ್ ಮಂಡಿಸಬಾರದು ಎಂದು ಸಿದ್ದರಾಮಯ್ಯ ಎಲ್ಲೂ ಹೇಳಿಲ್ಲ. ಕಾಂಗ್ರೆಸ್ ಹೈಕಮಾಂಡ್ ಸರಕಾರದ ಸುಭದ್ರತೆಗೆ ಮಾರ್ಗಸೂಚಿಗಳನ್ನು ಸಿದ್ಧಪಡಿಸಲಿದೆ ಎಂದು ಅವರು ಹೇಳಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News