ವಿವೇಕಾನಂದ ಎಂಜಿನಿಯರಿಂಗ್ ಕಾಲೇಜಿನ 8 ಪ್ರಾಜೆಕ್ಟ್ ಗಳು ರಾಜ್ಯ ಮಟ್ಟಕ್ಕೆ ಆಯ್ಕೆ

Update: 2018-06-26 13:23 GMT

ಪುತ್ತೂರು,ಜೂ.26: ಪುತ್ತೂರಿನ ವಿವೇಕಾನಂದ ಎಂಜಿನಿಯರಿಂಗ್ ಕಾಲೇಜಿನ ಅಂತಿಮ ವರ್ಷದ ವಿದ್ಯಾರ್ಥಿಗಳು ಅಭಿವೃದ್ಧಿಪಡಿಸಿ ತಯಾರಿಸಿದ 8 ಪ್ರಾಜೆಕ್ಟ್‍ಗಳು ಕರ್ನಾಟಕ ರಾಜ್ಯ ವಿಜ್ಞಾನ ಮತ್ತು ತಂತ್ರಜ್ಞಾನ ಮಂಡಳಿ ನಡೆಸುವ ರಾಜ್ಯಮಟ್ಟದ ಪ್ರಾತ್ಯಕ್ಷಿಕೆ ಮತ್ತು ಸ್ಪರ್ಧೆಗೆ ಆಯ್ಕೆಗೊಂಡಿವೆ.

ಇತ್ತೀಚೆಗೆ ಮಂಗಳೂರಿನಲ್ಲಿ ನಡೆದ ವಲಯಮಟ್ಟದ ಸ್ಪರ್ಧೆಯಲ್ಲಿ ವಿದ್ಯಾರ್ಥಿಗಳು ಉತ್ತಮ ಸಾಧನೆಯನ್ನು ಮಾಡಿ ಈ ಅರ್ಹತೆಯನ್ನು  ಗಳಿಸಿಕೊಂಡಿದ್ದಾರೆ. ರಾಜ್ಯಮಟ್ಟದ ಸ್ಪರ್ಧೆಯು ಆಗಸ್ಟ್ ತಿಂಗಳಿನಲ್ಲಿ ದಾವಣಗೆರೆಯಲ್ಲಿ ನಡೆಯಲಿದೆ.

ಬೆಳಗಾವಿಯ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯವು ಪ್ರತಿ ವರ್ಷವೂ ಅಂತಿಮ ವರ್ಷದ ವಿದ್ಯಾರ್ಥಿಗಳು ತಯಾರಿಸುವ ಉತ್ತಮ ಪ್ರಾಜೆಕ್ಟ್ ಗಳಿಗೆ ಅನುದಾನವನ್ನು ನೀಡುತ್ತಿದ್ದು, ಈ ವರ್ಷ ಕಾಲೇಜಿನ 10 ಪ್ರಾಜೆಕ್ಟ್‍ಗಳಿಗೆ ಅನುದಾನ ಲಭಿಸಿದೆ ಎಂದು ಕಾಲೇಜಿನ ಪ್ರಾಂಶುಪಾಲ ಡಾ.ಎಂ.ಎಸ್.ಗೋವಿಂದೇಗೌಡ ತಿಳಿಸಿದ್ದಾರೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News