​ಉಡುಪಿ :ದ್ವಿತೀಯ ಪಿಯುಸಿ ಪೂರಕ ಪರೀಕ್ಷೆಗೆ 1734 ವಿದ್ಯಾರ್ಥಿಗಳು

Update: 2018-06-26 16:21 GMT

ಉಡುಪಿ, ಜೂ.26: ಜಿಲ್ಲೆಯಲ್ಲಿ ಜೂ.29ರಿಂದ ಜುಲೈ 10ರವರೆಗೆ ನಡೆಯುವ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆಗೆ ಒಟ್ಟು 1,734 ವಿದ್ಯಾರ್ಥಿ ಗಳು ಹಾಜರಾಗಲಿದ್ದು, ಪರೀಕ್ಷೆಗಳು ಯಾವುದೇ ದೋಷವಿಲ್ಲದೇ ಸುಸೂತ್ರ ವಾಗಿ ನಡೆಯಲು ಸಂಬಂದಪಟ್ಟ ಎಲ್ಲಾ ಅಧಿಕಾರಿಗಳು ಕಾರ್ಯ ನಿರ್ವಹಿಸುವಂತೆ ಅಪರ ಜಿಲ್ಲಾಧಿಕಾರಿ ಅನುರಾಧ ಹೇಳಿದ್ದಾರೆ.

ಮಂಗಳವಾರ, ಮಣಿಪಾಲದ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ದ್ವಿತೀಯ ಪಿಯುಸಿ ಪೂರಕ ಪರೀಕ್ಷಾ ಪೂರ್ವ ಸಿದ್ದತಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಪ್ರಶ್ನೆ ಪತ್ರಿಕೆಗಳನ್ನು ಜಿಲ್ಲಾ ಖಜಾನೆಯಲ್ಲಿ ಭದ್ರವಾಗಿ ಇಡಲು ಎಲ್ಲಾ ವ್ಯವಸ್ಥೆ ಮಾಡಲಾಗಿದ್ದು, ಖಜಾನೆಯಲ್ಲಿ ಸಿಸಿ ಟಿವಿ ಅಳವಡಿಕೆ ಹಾಗೂ ಪ್ರಶ್ನೆಪತ್ರಿಕೆಯನ್ನು ಪಡೆಯುವ ಅಧಿಕಾರಿಗಳ ಬಯೋಮೆಟ್ರಿಕ್ ಪಡೆಯಲಾಗಿದೆ. ಪ್ರಶ್ನೆ ಪತ್ರಿಕೆಗಳು ಸಾಗಿಸುವ ವಾಹನಗಳಿಗೆ ಜಿಪಿಎಸ್ ಅಳವಡಿಸಲಾಗಿದ್ದು, ಸೂಕ್ತ ಪೊಲೀಸ್ ಭದ್ರತೆ ನೀಡಲಾಗುವುದು. ಖಜಾನೆಯಲ್ಲಿ ಪ್ರಶ್ನೆಪತ್ರಿಕೆ ಪಡೆದು, ನಿಗದಿತ ಅವಧಿಯೊಳಗೆ ಪರೀಕ್ಷಾ ಕೇಂದ್ರಗಳಿಗೆ ತಲುಪಿಸುವಂತೆ ಅಧಿಕಾರಿಗಳಿಗೆ ಅಪರ ಜಿಲ್ಲಾಧಿಕಾರಿ ಸೂಚಿಸಿದರು.

ಜಿಲ್ಲೆಯಲ್ಲಿ ಸರಕಾರಿ ಪದವಿ ಪೂರ್ವ ಕಾಲೇಜು ಉಡುಪಿ, ಎಂಜಿಎಂ ಪ.ಪೂ.ಕಾಲೇಜು ಉಡುಪಿ, ಶ್ರೀ ಭುವನೇಂದ್ರ ಪ.ಪೂ.ಕಾಲೇಜು ಕಾರ್ಕಳ, ಕುಂದಾಪುರ ಭಂಡಾರ್‌ಕಾರ್ಸ್‌ ಪ.ಪೂ.ಕಾಲೇಜುಗಳಲ್ಲಿ ಪರೀಕ್ಷೆಗಳು ನಡೆಯಲಿವೆ. ಎಲ್ಲಾ ಕೇಂದ್ರಗಳಿಗೂ ಪೊಲೀಸ್ ಭದ್ರತೆ ಹಾಗೂ ಪರೀಕ್ಷಾ ಕೇಂದ್ರದ 200ಮೀ. ವ್ಯಾಪ್ತಿಯಲ್ಲಿ 144 ಸೆಕ್ಷನ್‌ನಡಿ ನಿಷೇಧಾಜ್ಞೆ ವಿಧಿಸಲಾಗುವುದು ಎಂದು ಅನುರಾಧ ತಿಳಿಸಿದರು.

ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಈಗಾಗಲೇ ಪ್ರವೇಶ ಪತ್ರಗಳನ್ನು ನೀಡಲಾಗಿದೆ. ಪ್ರವೇಶ ಪತ್ರದಲ್ಲಿ ಪರೀಕ್ಷೆಯ ದಿನ, ಸಮಯ ಹಾಗೂ ವಿಷಯ ಗಳಿದ್ದು, ವಿದ್ಯಾರ್ಥಿಗಳು ಲೋಪಗಳಿದ್ದಲ್ಲಿ ಸರಿಪಡಿಸಿಕೊಳ್ಳುವಂತೆ ಹಾಗೂ ಪ್ರಾಂಶುಪಾಲರು ಸಹ ಪರಿಶೀಲಿಸಿ, ವಿದ್ಯಾರ್ಥಿಗಳಿಗೆ ಪ್ರವೇಶ ಪತ್ರಗಳನ್ನು ವಿತರಿಸುವಂತೆ ಜಿಲ್ಲಾ ಪ.ಪೂ.ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಶೇಖರಪ್ಪಹೇಳಿದರು.

ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಈಗಾಗಲೇ ಪ್ರವೇಶ ಪತ್ರಗಳನ್ನು ನೀಡಲಾಗಿದೆ. ಪ್ರವೇಶ ಪತ್ರದಲ್ಲಿ ಪರೀಕ್ಷೆಯ ದಿನ, ಸಮಯ ಹಾಗೂ ವಿಷಯ ಗಳಿದ್ದು, ವಿದ್ಯಾರ್ಥಿಗಳು ಲೋಪಗಳಿದ್ದಲ್ಲಿ ಸರಿಪಡಿಸಿಕೊಳ್ಳುವಂತೆ ಹಾಗೂ ಪ್ರಾಂಶುಪಾಲರು ಸಹ ಪರಿಶೀಲಿಸಿ, ವಿದ್ಯಾರ್ಥಿಗಳಿಗೆ ಪ್ರವೇಶ ಪತ್ರಗಳನ್ನು ವಿತರಿಸುವಂತೆ ಜಿಲ್ಲಾ ಪ.ಪೂ.ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಶೇಖರಪ್ಪಹೇಳಿದರು. ಸಭೆಯಲ್ಲಿ ಜಿಲ್ಲಾ ಖಜಾನಾಧಿಕಾರಿ ಸಾವಿತ್ರಿ, ಉಡುಪಿ ತಹಶೀಲ್ದಾರ್ ಪ್ರದೀಪ್ ಕುರ್ಡೆಕರ್ ಹಾಗೂ ಪ.ಪೂ. ಕಾಲೇಜುಗ ಪ್ರಾಂಶುಪಾಲರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News