ಪ್ರತ್ಯೇಕ ಪ್ರಕರಣ: ಮೂವರ ಆತ್ಮಹತ್ಯೆ

Update: 2018-06-26 18:09 GMT

ಕುಂದಾಪುರ, ಜೂ.26: ತಾಯಿಯ ಖಾಯಿಲೆಯಿಂದ ಮಾನಸಿಕವಾಗಿ ನೊಂದ ಪ್ರತಾಪ(31) ಎಂಬವರು ಜೀವನದಲ್ಲಿ ಜಿಗುಪ್ಸೆಗೊಂಡು ಜೂ.25 ರಂದು ಮಧ್ಯಾಹ್ನ ವೇಳೆ ಬಸ್ರೂರು ಮೇರ್ಡಿ ಎಂಬಲ್ಲಿ ಚಲಿಸುತ್ತಿದ್ದ ರೈಲಿನಡಿಗೆ ಬಿದ್ದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಮಾನಸಿಕವಾಗಿ ಖಿನ್ನರಾಗಿದ್ದ ಕುಂದಾಪುರದ ಸುಬ್ಬ ಮೊಗೇರ(60) ಎಂಬ ವರು ಜೀವನದಲ್ಲಿ ಜಿಗುಪ್ಸೆಗೊಂಡು ಜೂ.25ರಂದು ರಾತ್ರಿ ವೇಳೆ ಮನೆಯ ಕೋಣೆಯ ಒಳಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕಾರ್ಕಳ: ಕಾರ್ಕಳ ಕಸಬಾ ಗೊಮ್ಮಟೇಶ್ವರ ಬೆಟ್ಟದ ಸಮೀಪದ ಬಾಡಿಗೆ ಮನೆಯಲ್ಲಿ ವಾಸವಾಗಿರುವ ಯಮನಪ್ಪಎಂಬವರ ಪತ್ನಿ ಮಂಜುಳಾ ಎಂಬಾಕೆ ಜೂ.25ರಂದು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆತ್ಮಹತ್ಯೆಗೆ ನಿಖರವಾದ ಕಾರಣ ತಿಳಿದುಬಂದಿಲ್ಲ. ಈ ಬಗ್ಗೆ ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News